Hampi Utsav 2023: ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಅದ್ದೂರಿ ಹಂಪಿ ಉತ್ಸವ ನಡೆಸಲು ತೀರ್ಮಾನ: ಶಶಿಕಲಾ ಜೊಲ್ಲೆ
ಹೊಸಪೇಟೆ (ವಿಜಯಗರ ಜಿಲ್ಲೆ) ಡಿಸೆಂಬರ್ 05: ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆಯನ್ನು ನಡೆಸುವಂತೆ ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಸೂಚನೆ ನೀಡಿದ್ದಾರೆ.
ಸೋಮವಾರ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅಧಿಕಾರಿಗಳು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಹಂಪಿ ಉತ್ಸವವನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಯಿತು. ಈ ಮೊದಲು 2023 ರ ಜನವರಿ ತಿಂಗಳ 7 ಮತ್ತು 8 ರಂದು ಎರಡು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಅದೇ ಸಮಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಕಾರ್ಯಕ್ರಮವನ್ನು ಜನವರಿ ತಿಂಗಳಾಂತ್ಯಕ್ಕೆ ಮುಂದೂಡಲು ತೀರ್ಮಾನಿಸಲಾಗಿದೆ. ಜನವರಿ 27,28 ಮತ್ತು 29 ರಂದು ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ದಿನಾಂಕವನ್ನು ತಾತ್ಕಾಲಿಕವಾಗಿ ನಿಗದಿಪಡಿಸಲಾಗಿದೆ. ಆದರೆ, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಕೋವಿಡ್ ಸಾಂಕ್ರಾಮಿಕದ ಕಾರಣ ಕಳೆದ ಎರಡು ವರ್ಷಗಳಿಂದ ಹಂಪಿ ಉತ್ಸವವನ್ನು ಆಯೋಜಿಸಲಾಗಿರಲಿಲ್ಲ. ಹೀಗಾಗಿ ಈ ಬಾರಿ ಕಳೆದ ಎಲ್ಲಾ ಹಂಪಿ ಉತ್ಸವಗಳಿಗಿಂತಲೂ ಅದ್ದೂರಿಯಾಗಿ ಆಚರಿಸಲಾಗುವುದು. ಮೂರು ದಿನಗಳ ಕಾಲ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಸಾರುವಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜನವರಿ ತಿಂಗಳಾಂತ್ಯಕ್ಕೆ ಯಾವುದೇ ಹಂಪಿ ಉತ್ಸವ ನಡೆಯಲೇಬೇಕು. ವಿಜಯನಗರ ಗತ ವೈಭವವನ್ನು ಮರುಸೃಷ್ಟಿಸುವ ರೀತಿಯಲ್ಲಿ ಉತ್ಸವ ಆಯೋಜಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಈಗಾಗಲೇ 2021-22 ನೇ ಸಾಲಿನ ಹಂಪಿ ಉತ್ಸವ ಆಚರಣೆಯ ಸಲುವಾಗಿ ಕನ್ನಡ ಸಂಸ್ಕೃತಿ ಇಲಾಖೆಯಿಂದ 4.10 ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದೆ. 6 ಕೋಟಿ ರೂಪಾಯಿಗಳ ಅನುದಾನ ನೀಡುವಂತೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಬರೆಯಲಾಗಿದೆ. ಅಗತ್ಯ ಅನುದಾನವನ್ನು ನೀಡುವಂತೆ ಈಗಾಗಲೇ ಸರಕಾರದ ವಿವಿಧ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಇದಲ್ಲದೆ ಖಾಸಗಿ ಕಂಪನಿಗಳ ಸಿಎಸ್‌ಆರ್ ನಿಧಿಯನ್ನು ನೀಡುವಂತೆ ಕೋರಲಾಗುವುದು ಎಂದರು.
ಈ ಬಾರಿ ಎರಡು ಭವ್ಯ ಮುಖ್ಯ ವೇದಿಕೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಕಲಾವಿದರುಗಳ ಲಭ್ಯತೆ ಹಾಗೂ ಕಾರ್ಯಕ್ರಮಗಳ ಸೇರ್ಪಡೆಯ ಮೇಲೆ ಇನ್ನೂ 2 ಉಪ ವೇದಿಕೆಗಳನ್ನು ಸೇರ್ಪಡಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು

ಇನ್ನೂ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ವೆಂಕಟೇಶ್ ಟಿ, ಪೊಲೀಷ್ ವರಿಷ್ಠಾಧಿಕಾರಿ ಶ್ರೀಹರಿಬಾಬು, ಸಂಸದರಾದ ದೇವೇಂದ್ರಪ್ಪ, ನಗರಸಭೆ ಅಧ್ಯಕ್ಷರಾದ ಸುಂಕಮ್ಮ ಸೇರಿದಂತೆ ಹಲವು ಜನಪ್ರತಿನಿಧಿಗಳೂ ಉಪಸ್ಥಿತರಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications