2023ರ ಚುನಾವಣೆ; ಉಪ ಚುನಾವಣಾ ಆಯುಕ್ತರ ಮಹತ್ವದ ಸಭೆ

ಬೆಂಗಳೂರು, ಜನವರಿ 03; ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ರಾಜಕೀಯ ಪಕ್ಷಗಳ ಜೊತೆಗೆ ಚುನಾವಣಾ ಆಯೋಗವು ಸಹ ಚುನಾವಣೆಗೆ ಸಿದ್ಧತೆಗಳನ್ನು ಕೈಗೊಂಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ. ಸಿ. ಪಾತ್ರ ವೀಕ್ಷಿಸಿದರು.

ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ಪೂರ್ವತಯಾರಿ ಕಾರ್ಯ ವೀಕ್ಷಿಸಲು ಇಬ್ಬರು ಅಧಿಕಾರಿಗಳು ಜನವರಿ 2 ಮತ್ತು 3ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಮೊದಲ ದಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

2023 Karnataka Assembly Elections Meeting By Deputy Election Commissioner

ಎರಡನೇ ದಿನ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಅಧಿಕಾರಿಗಳ ತಂಡಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ನಡೆದ ಚರ್ಚೆ ಏನು?; ಈ ಸಭೆಯಲ್ಲಿ ಮುಖ್ಯವಾಗಿ ಇದೇ ತಿಂಗಳು ಪ್ರಕಟವಾಗಲಿರುವ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದವು. ಮುಖ್ಯವಾಗಿ ಅಂತಿಮ ಮತದಾರರ ಪಟ್ಟಿ ತಯಾರಿಕೆಯಲ್ಲಿ ಮೃತ ಪಟ್ಟವರ ಹೆಸರುಗಳನ್ನು ತೆಗೆದು ಹಾಕುವುದು, ವಿಳಾಸ ಬದಲಾದವರ ಹೆಸರುಗಳ ವರ್ಗಾವಣೆ ಮತ್ತು ಹೊಸ ಯುವ ಮತದಾರರ ಹೆಸರುಗಳ ಸೇರ್ಪಡೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಯಿತು.

ಮತದಾರರ ಪಟ್ಟಿಯಲ್ಲಿ ಮಾಹಿತಿ ಸರಿಯಾಗಿರಬೇಕು ಜೊತೆಗೆ ಯಾವುದೇ ಕಾರಣದಿಂದ ಇರುವವರ ಹೆಸರುಗಳನ್ನು ಕೈ ಬಿಡದಂತೆ ಜಾಗೃತಿವಹಿಸಬೇಕು, ಜಿಲ್ಲಾ ಚುನಾವಣಾಧಿಕಾರಿಗಳು ಖುದ್ದು ಬೇಟಿ ನೀಡಿ ಪರಿಶೀಲಿಸಬೇಕು ಎಂದು ನಿರ್ದೇಶನ ನೀಡಲಾಯಿತು.

2023 Karnataka Assembly Elections Meeting By Deputy Election Commissioner

ಪ್ರತಿ ಮನೆ-ಮನೆಗೆ ಭೇಟಿ ನೀಡಿ ಸರಿಯಾದ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹಿಸಿರುವ ಬಗ್ಗೆ ನಿಗಾವಹಿಸಬೇಕು ಎಂದು ತಿಳಿಸಲಾಗಿದೆ. ಮತದಾರರ ಪಟ್ಟಿಯ ತಯಾರಿಯಲ್ಲಿ ತಮ್ಮ ಜಿಲ್ಲಾ ವ್ಯಾಪ್ತಿಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಅತ್ಯಂತ ಕಡಿಮೆ ಸೇರ್ಪಡೆಗೊಂಡಿರುವ ಮತ್ತು ತೆಗೆದುಹಾಕಿರುವ 10 ಮತಕೇಂದ್ರಗಳನ್ನು ಗುರುತಿಸಿ ಅವುಗಳಿಗೆ ಸರಿಯಾದ ಕಾರಣಗಳನ್ನು ಹುಡುಕಿ ಗುರುತಿಸುವಂತೆ ಸೂಚಿಸಲಾಗಿದೆ.

ಹಿಂದಿನ ಚುನಾವಣಾ ಸಂದರ್ಭದಲ್ಲಿ ಅತ್ಯಂತ ಕಡಿಮೆ ಮತದಾನವಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಬಾರಿ ಶೇಕಡಾವಾರು ಮತದಾನವನ್ನು ಹೆಚ್ಚಿಸಲು ಸೂಕ್ತ ಕ್ರಮಕೈಗೊಳ್ಳುವುದು ಹಾಗೂ ಮತದಾರರ ಜಾಗೃತಿಗಾಗಿ ಹೆಚ್ಚಿನ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಭೆಯಲ್ಲಿ ಸಲಹೆ ನೀಡಲಾಗಿದೆ.

ಚುನಾವಣಾ ಕಾರ್ಯಕ್ಕಾಗಿ ಅವಶ್ಯವಿರುವ ಮಾನವ ಸಂಪನ್ಮೂಲ ಕುರಿತು ಸಹ ಚರ್ಚೆ ನಡೆದಿದೆ. ತಮಗೆ ಅವಶ್ಯವಿರುವ ಸ್ಥಾನಗಳ ಕುರಿತು ಕೂಡಲೇ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಗಮನಕ್ಕೆ ತರಲು ನಿರ್ದೇಶನ ಕೊಡಲಾಗಿದೆ.

ಎರಡು ದಿನಗಳ ಬೇಟಿಯಲ್ಲಿ ಮೊದಲ ದಿನ ರಾಜ್ಯ ಮಟ್ಟದ ಹಾಗೂ ಎರಡನೇ ದಿನ ಜಿಲ್ಲಾಮಟ್ಟದ ಸಭೆ ನಡೆಸಿದ ನಂತರ ಪೂರ್ವ ತಯಾರಿ ಬಗ್ಗೆ ಅಧಿಕಾರಿಗಳು ತೃಪ್ತಿ ವ್ಯಕ್ತಪಡಿಸಿದರು.

ಉತ್ತಮವಾಗಿ ಚುನಾವಣೆ ನಡೆಸಲು ಎಲ್ಲರೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದರು. ಸಭೆಯಲ್ಲಿ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್, ಪಿ. ರಾಜೇಂದ್ರ ಚೋಳನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

2023ರಲ್ಲಿ ವಿಧಾನಸಭೆ ಚುನಾವಣೆ ನಡೆಯುವ ರಾಜ್ಯಗಳಲ್ಲಿ ಕರ್ನಾಟಕ ಸಹ ಸೇರಿದೆ. ರಾಜ್ಯದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಮೇ 20ರೊಳಗೆ ರಾಜ್ಯದಲ್ಲಿ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+