2025 -2026 SSLC Good News: ಎಸ್‌ಎಸ್‌ಎಲ್‌ಸಿ & ಪಿಯುಸಿ ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ಇಳಿಕೆ ?!
SSLC Good News: ಕರ್ನಾಟಕ ಸರ್ಕಾರವು ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್ ನೀಡುವುದಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ವಿಶೇಷತೆ ಸೇರಿದಂತೆ ಹಲವು ಬದಲಾವಣೆಗಳು ಈ ಬಾರಿ ಮಾಡಲಾಗಿತ್ತು. ಆದರೆ, ಇದೀಗ ಎಸ್‌ಎಸ್‌ಎಲ್‌ಸಿ & ಪಿಯುಸಿ ವಿದ್ಯಾರ್ಥಿಗಳಿಗೆ 2025 - 2026ನೇ ಶೈಕ್ಷಣಿಕ ವರ್ಷದಲ್ಲಿ ಗುಡ್‌ನ್ಯೂಸ್ ನೀಡುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದ್ದು. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ. ಪಾಸಿಂಗ್ ಮಾರ್ಕ್ಸ್ ಇಳಿಕೆ ಮಾಡುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಸರ್ಕಾರವು ಈ ಬಾರಿ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್ ನೀಡುವುದಕ್ಕೆ ಮುಂದಾಗಿದೆ. 2025 - 2026ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಎಸ್‌ಎಸ್‌ಎಲ್‌ಸಿ (SSLC exam) ಮತ್ತು ಪಿಯುಸಿ ಪರೀಕ್ಷೆಯಲ್ಲಿ (PUC exam) ಪಾಸಿಂಗ್ ಮಾರ್ಕ್ಸ್ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ದೇಶದ ವಿವಿಧ ರಾಜ್ಯಗಳು ಹಾಗೂ ಕೇಂದ್ರ ಶೈಕ್ಷಣಿಕ ಮಂಡಳಿಗಳ ಮಾದರಿಯನ್ನು ಕರ್ನಾಟಕದಲ್ಲೂ ಅನುಸರಿಸುವ ಬಗ್ಗೆ ಚರ್ಚೆ ನಡೆದಿದೆ. ಈ ಮೂಲಕ ಕರ್ನಾಟಕದಲ್ಲಿ ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಉತ್ತೀರ್ಣ ಅಂಕ (ಪಾಸಿಂಗ್ ಮಾರ್ಕ್ಸ್) 35ರಿಂದ 33ಕ್ಕೆ ಇಳಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಲಾಗಿದೆ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಸೇರಿದಂತೆ ಬಹುತೇಕ ಪಾಸಿಂಗ್ ಮಾರ್ಕ್ಸ್ 35 ಆಗಿದೆ. ಇದೀಗ ಅದನ್ನು 33ಕ್ಕೆ ಇಳಿಸುವುದಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದ್ದು. ಈ ನಿಟ್ಟಿನಲ್ಲಿ ಈಗಲಿಂದಲೇ ಚರ್ಚೆಗಳು ಶುರುವಾಗಿವೆ.
ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್ ನೀಡಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪಾಸಿಂಗ್ ಮಾರ್ಕ್ಸ್ ಕಡಿಮೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲೂ ಸಹ ಇತರ ರಾಜ್ಯಗಳ ಪ್ರದೇಶಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಪಾಸಿಂಗ್ ಮಾರ್ಕ್ಸ್ ನಿಗದಿ ಮಾಡುವುದು ಇದರ ಉದ್ದೇಶವಾಗಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. 2025-26 ಶೈಕ್ಷಣಿಕ ವರ್ಷದಲ್ಲಿ ಇದನ್ನು ಜಾರಿಗೆ ತರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶಿಕ್ಷಣ ಇಲಾಖೆಯು ಈ ಸಂಬಂಧ ಈಗಾಗಲೇ ಕಾನೂನು ಪ್ರಕ್ರಿಯೆಯ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
ಇನ್ನು ಕರ್ನಾಟಕದ ನೆರೆಯ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳಗಳಲ್ಲಿ ಉತ್ತೀರ್ಣ (ಪಾಸಿಂಗ್ ಮಾರ್ಕ್ಸ್) ಅಂಕಗಳು 33 ಆಗಿವೆ. ಹೀಗಾಗಿ, ಕರ್ನಾಟಕದಲ್ಲಿಯೂ ಇದೇ ಮಾದರಿಯನ್ನು ಅನುಸರಿಸುವುದಕ್ಕೆ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಒಟ್ಟು ಎಸ್‌ಎಸ್‌ಎಲ್‌ಸಿ ಫಲಿತಾಂಶವು 66.14% ಬಂದಿದೆ. ಈ ಬಾರಿಯ ಫಲಿತಾಂಶವು ಕಳೆದ ಬಾರಿಗಿಂತಲೂ ಶೇ 8% ಉತ್ತಮವಾಗಿದೆ ಎಂದು ಹೇಳಲಾಗಿದೆ.












Click it and Unblock the Notifications