ಹಾವೇರಿ: ಜನವರಿ 11 ರಂದು ಸಂಸದರ ಕ್ರೀಡಾ ಮಹೋತ್ಸವ-2026
ಹಾವೇರಿ: ಕ್ರೀಡಾ ಸಂಸ್ಕೃತಿಯನ್ನು ಪೋಷಿಸುವುದು, ಸ್ಥಳೀಯ (ದೇಶಿಯ) ಮತ್ತು ಮುಖ್ಯವಾಹಿನಿಯ ಕ್ರೀಡೆಗಳನ್ನು ಉತ್ತೇಜಿಸಲು, ಯುವಕರು ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಹಾವೇರಿ - ಗದಗ ಲೋಕಸಭಾ ವ್ಯಾಪ್ತಿಯಲ್ಲಿ ಸಂಸದರ ಕ್ರೀಡಾ ಮಹೋತ್ಸವ-2026 ಆಯೋಜಿಸಲಾಗುತ್ತಿದೆ. ಇದು ಸಚಿವಾಲಯದ ಮಹತ್ವದ ದೃಷ್ಟಿಕೋನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಸೋಮವಾರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಂಸದರ ಕ್ರೀಡಾಕೂಟ -2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಒಳಗೊಂಡಂತೆ ಕ್ರೀಡಾ ಮಹೋತ್ಸವ-2026, ನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಿದರು.

ಗ್ರಾಮೀಣ, ಹೋಬಳಿ ಮಟ್ಟದಲ್ಲಿ ಆಯ್ಕೆಯಾದವರಿಗೆ ಒತ್ತು ನೀಡಿ
ಜನವರಿ 11 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆ ಮಾಡುವಂತೆ ಹಾಗೂ ಉಳಿದ ಕ್ರೀಡೆಗಳನ್ನು ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟ ಹೀಗೆ ಮೂರು ವಿಭಾಗಗಳಲ್ಲಿ ನಡೆಸಿ, ಹೋಬಳಿ ಮಟ್ಟದಲ್ಲಿ ಆಯ್ಕೆಯಾದವರನ್ನು ತಾಲೂಕ ಮಟ್ಟದಲ್ಲಿ, ತಾಲೂಕ ಮಟ್ಟದಲ್ಲಿ ಆಯ್ಕೆಯಾದವರನ್ನು ಜಿಲ್ಲಾಮಟ್ಟದಲ್ಲಿ ಪರಿಗಣಿಸುವಂತೆ ಸೂಚಿಸಿದರು. ಕ್ರೀಡಾಕೂಟದಲ್ಲಿ ಕಬಡ್ಡಿ, ಖೋಖೊ, ವಾಲಿಬಾಲ್, 100, 200, 400 ಮೀಟರ್ ಓಟ, ರಿಲೇ ಹಾಗೂ ಇನ್ನಿತಿರ ಕ್ರೀಡೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಕ್ರೀಡಾಪಟುಗಳ ನೋಂದಣಿ, ತಂಡಗಳ ರಚನೆ
ಪೂರ್ವ-ಕಾರ್ಯಕ್ರಮ ಯೋಜನೆಗೆ ಸ್ಥಳ ಆಯ್ಕೆ, ಪಾಲುದಾರಿಕೆಗಳು, ಜಾಗೃತಿ ಅಭಿಯಾನ ಕ್ರೀಡಾ ಮೂಲಸೌಕರ್ಯ, ತರಬೇತುದಾರರು ಮತ್ತು ತೀರ್ಪುಗಾರರು ಮೊದಲಾದವುಗಳನ್ನು ಸಿದ್ದಪಡಿಸಿಕೊಂಡು ಮಾಹಿತಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕ್ರೀಡಾಪಟು ನೋಂದಣಿ ನಿರ್ವಹಣೆಗಾಗಿ ಪ್ರಮುಖ ಸ್ಥಳಗಳಲ್ಲಿ ಆನ್ಲೈನ್ ಮತ್ತು ಆಫ್ಲೈನಗಳ ಮೂಲಕ ಕ್ರೀಡಾಪಟುಗಳು ನೊಂದಣಿ ಆರಂಭಿಸಿ ಕ್ರೀಡಾಪಟುಗಳ ನೋಂದಣಿ ಆಧಾರದ ಮೇಲೆ ತಂಡಗಳನ್ನು ರಚಿಸುವಂತೆ ಅವರು ಸಲಹೆ ನೀಡಿದರು. ಕ್ರೀಡಾಕೂಟದಲ್ಲಿ ಭಾಗ ವಹಿಸುವ ಕ್ರೀಡಾಪಟುಗಳಿಗೆ ಉಟೋಪಚಾರ ಹಾಗೂ ಟಿ ಶರ್ಟ್ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಪುನೀತ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಿಡಾಕೂಟ ಯಶಸ್ವಿ ಆಯೋಜನೆ ಹಾಗೂ ಸಿದ್ಧತೆಗಳ ಬಗ್ಗೆ ಚರ್ಚಿಸಿ ಒಂದಷ್ಟು ಮಾಹಿತಿಗಳನ್ನು ಸಂಸದ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications