2028 Election Strategy: 2028ರ ಚುನಾವಣೆ ಮೇಲೆ ಹೆಚ್‌ಡಿಕೆ ಕಣ್ಣು! ಪ್ರತಿ ಕುಟುಂಬಕ್ಕೊಂದು ಸರ್ಕಾರಿ ಉದ್ಯೋಗ?

2028ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮತ್ತೆ ಸಕ್ರಿಯವಾಗಿ ಎಂಟ್ರಿ ಕೊಡಲು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಸಿದ್ಧತೆ ನಡೆಸುತ್ತಿದ್ದಾರಾ ಎಂಬ ಚರ್ಚೆ ಶುರುವಾಗಿದೆ. ಮುಂದಿನ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಹೆಚ್‌ಡಿಕೆ, ಪ್ರತಿ ಕುಟುಂಬಕ್ಕೆ ಒಂದೊಂದು ಸರ್ಕಾರಿ ಉದ್ಯೋಗ ಕಲ್ಪಿಸುವ ಹೊಸ ಆಲೋಚನೆ ಮುಂದಿಟ್ಟಿದ್ದಾರೆ.

ಹಾಗಾದರೆ, 2028ರಲ್ಲಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಗಾದಿಗೇರುವ ಗುರಿ ಹೊಂದಿದ್ದಾರಾ? ರಾಜ್ಯ ರಾಜಕಾರಣಕ್ಕೆ ಅವರ ಮರುಪ್ರವೇಶ ಜೆಡಿಎಸ್‌ನ ಮುಂದಿನ ನಡೆಗೆ ಯಾವ ತಿರುವು ನೀಡಲಿದೆ? ಉದ್ಯೋಗದ ಹೊಸ ಆಲೋಚನೆ ಚುನಾವಣಾ ಅಸ್ತ್ರವಾಗಲಿದೆಯೇ ಎಂಬ ಪ್ರಶ್ನೆಗಳು ಈಗ ಮುನ್ನೆಲೆಗೆ ಬಂದಿವೆ.

2028 Election Strategy HD Kumaraswamy Eyes 2028 Elections Proposes One Government Job for Every Family

ಸರ್ಕಾರಿ ಉದ್ಯೋಗಗಳ ನೇಮಕ: HDK

ಕೆಪಿಎಸ್ಸಿಯಲ್ಲಿ ನಡೆಯುತ್ತಿರುವ ಅಕ್ರಮ ನೇಮಕಾತಿ ಮತ್ತು ಮಿತಿಮೀರಿದ ಭ್ರಷ್ಟಾಚಾರದ ಕುರಿತಂತೆ ಮುಕ್ತ ಸಂವಾದದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರು, ಈ ಸಂಸ್ಥೆಯನ್ನು ಸ್ವಚ್ಛಗೊಳಿಸುವುದು ಸೇರಿದಂತೆ ಭವಿಷ್ಯದಲ್ಲಿ ಉದ್ಯೋಗ ಸೃಷ್ಟಿ ಮಾಡುವ ಬಗೆ ಹಾಗೂ ಸರ್ಕಾರಿ ಉದ್ಯೋಗಗಳ ನೇಮಕದಲ್ಲಿ ತಮಗಿರುವ ಹೊಸ ಆಲೋಚನೆಯನ್ನು ಜನತೆಯ ಮುಂದೆ ಇರಿಸಿದ್ದಾರೆ.

ನಿಮ್ಮ ತಲೆಗೆ ಸ್ವಲ್ಪ ಕೆಲಸ ಕೊಡಿ ಎಂದು ಮಾತು ಶುರು ಮಾಡಿದ ಕುಮಾರಸ್ವಾಮಿ ಅವರು, ಒಮ್ಮೆ ಒಬ್ಬರು ಸರಕಾರಿ ಉದ್ಯೋಗಕ್ಕೆ ನೇಮಕವಾದರೆ ಅವರಿಗೆ 35 ವರ್ಷ ಸೇವಾವಧಿ ಇರುತ್ತದೆ. ಆದರೆ ಪ್ರತೀ ಕುಟುಂಬಕ್ಕೆ ತಲಾ ಒಂದು ಉದ್ಯೋಗ ಕಲ್ಪಿಸುವ ಉದ್ದೇಶದಿಂದ 35 ವರ್ಷದ ಸೇವಾವಧಿ ಬದಲಿಗೆ 10ರಿಂದ 15 ಅಥವಾ 20 ವರ್ಷಕ್ಕೆ ಇಳಿಸಬೇಕು. ಇಷ್ಟು ಮಿತಿಯನ್ನು ಹಾಕುವ ಮೂಲಕ ಉದ್ಯೋಗಗಳನ್ನು ಎಲ್ಲರಿಗೂ ಕೊಡುವ ಪ್ರಯತ್ನ ಮಾಡಬಹುದು ಎಂದು ಹೇಳಿದರು.

ಪಿಂಚಣಿ ಸೇರಿದಂತೆ ಎಲ್ಲಾ ಸೌಲಭ್ಯಗಳಿಗೆ ಅರ್ಹ

ಕೆಲಸದಿಂದ ನಿವೃತ್ತಿಯಾಗುವ ಉದ್ಯೋಗಿ ನಿವೃತ್ತಿ ಆದ ನಂತರ ದೊರೆಯುವ ಪಿಂಚಣಿ ಸೇರಿದಂತೆ ಎಲ್ಲಾ ಸೌಲಭ್ಯಗಳಿಗೆ ಅರ್ಹನಾಗಿರುತ್ತಾನೆ. ಇದರಿಂದ ಉದ್ಯೋಗ ಸಿಗದೇ ಇರುವವರಿಗೆ ಅವಕಾಶ ದೊರೆಯುತ್ತದೆ ಹಾಗೂ ನಿರುದ್ಯೋಗ ನಿವಾರಣೆಯಲ್ಲಿ ದೊಡ್ಡ ಪ್ರಯತ್ನ ಮಾಡಿದಂತೆ ಆಗುತ್ತದೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕರೆ ನಾನು ಈ ಯೋಜನೆ ಅನುಷ್ಠಾನಕ್ಕೆ ತರುವ ಉದ್ದೇಶ ಹೊಂದಿದ್ದೇನೆ. ಯುವ ಜನರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಇಂಥ ಯೋಚನೆ ಕಾರ್ಯರೂಪಕ್ಕೆ ಬಂದರೆ ಹೇಗೆ ಎಂದು ನಾನು ಆಲೋಚನೆ ಮಾಡುತ್ತಿದ್ದೇನೆ. ನನ್ನ ಪ್ರಕಾರ ಪ್ರತಿ ಮನೆಗೂ ಕನಿಷ್ಠ ಒಂದು ಸರ್ಕಾರಿ ಕೆಲಸವಾದರೂ ದೊರೆಯಬೇಕು. ನನ್ನ ಆಲೋಚನೆಯನ್ನು ಜನರ ಮುಂದೆ ಇರಿಸಿದ್ದೇನೆ. ಇದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯಲಿ ಎಂದು ಸಚಿವರು ಹೇಳಿದರು.

ರಾಜ್ಯದಲ್ಲಿ ನವರಾತ್ರಿ ಹಬ್ಬದ ಸಂದರ್ಭವಿದು. ಈ ಒಳ್ಳೆಯ ಸಂದರ್ಭದಲ್ಲಿ ಯುವಜನರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇನೆ. ಪ್ರಾಮಾಣಿಕವಾಗಿ ಚಿಂತನೆ ಮಾಡುತ್ತಿದ್ದೇನೆ. ನೀವೆಲ್ಲರೂ ನನ್ನ ಮಾತನ್ನು ನೆನಪಿಟ್ಟುಕೊಳ್ಳಿ. ಈ ಬಗ್ಗೆ ಚರ್ಚೆ ಮಾಡಿ, ಈ ಬಗ್ಗೆ ನಿಮ್ಮೆಲ್ಲರ ಅಭಿಪ್ರಾಯ ತಿಳಿಸಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

2028 Election Strategy: ಕೆಪಿಎಸ್ಸಿ ಭ್ರಷ್ಟಾಚಾರದ ಕೂಪ

ನಮ್ಮಲ್ಲಿ ನಿರುದ್ಯೋಗ ಅಗಾಧ ಪ್ರಮಾಣದಲ್ಲಿ ಬೆಳೆಯುತ್ತಿದೆ. ಸರಕಾರಿ ಮಟ್ಟದಲ್ಲಿ ಸಮರ್ಥರಿಗೆ ಉದ್ಯೋಗ ನೀಡಲು ಆಗುತ್ತಿಲ್ಲ. ಕರ್ನಾಟಕ ಲೋಕಸೇವಾ ಆಯೋಗ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. ಪಾರದರ್ಶತವಾಗಿ, ನ್ಯಾಯ ಸಮ್ಮತವಾಗಿ ಅರ್ಹರನ್ನು ಆಯ್ಕೆ ಮಾಡಿ ಸರ್ಕಾರಿ ಸೇವೆಗೆ ಕಳಿಸಬೇಕಾದ ಕೆಪಿಎಸ್ಸಿ ಭ್ರಷ್ಟಾಚಾರದ ಕೂಪವಾಗಿದೆ. ಹಣಕ್ಕಾಗಿ ಉದ್ಯೋಗವನ್ನು ಮಾರಿಕೊಳ್ಳಲಾಗುತ್ತಿದೆ. ಸಂಸ್ಥೆಯ ಅಧ್ಯಕ್ಷರು ಮತ್ತು ಸದಸ್ಯರು ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಂಸ್ಥೆಗೆ ಹೋಗುವ ಅಧಿಕಾರಿಗಳು ಕೂಡ ಹಣ ಮಾಡುವ ದಂಧೆಯಲ್ಲಿ ನಿರತರಾಗಿದ್ದಾರೆ ಎಂದು ಸಚಿವರು ದೂರಿದರು.

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಳು, ಪಶುವೈದ್ಯ ಇಲಾಖೆಯ ನೇಮಕಾತಿ ಸೇರಿದಂತೆ ಅನೇಕ ನೇಮಕ ಪ್ರಕ್ರಿಯೆಗಳಲ್ಲಿ ಅಗಾಧವಾದ ಭ್ರಷ್ಟಾಚಾರ ನಡೆದಿದೆ. ಅಲ್ಲದೆ ಕೆಎಎಸ್ ಆಯ್ಕೆ ಪ್ರಕ್ರಿಯೆ ಭ್ರಷ್ಟಾಚಾರದ ಮಹಾಕೂಪವಾಗಿದೆ. ಇಲ್ಲಿ ಹಣದ ವ್ಯವಹಾರ ಸೇರಿದಂತೆ ಸ್ವಜನ ಪಕ್ಷಪಾತ, ಜಾತಿ ವ್ಯಾಮೋಹದಿಂದ ಅರ್ಹ ಅಭ್ಯರ್ಥಿಗಳಿಗೆ ವಂಚನೆ ಮಾಡಲಾಗುತ್ತಿದೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+