2028ರ ಕರ್ನಾಟಕ ಚುನಾವಣೆ: ಅಚ್ಚರಿಯ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುತ್ತೇನೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಪುಸ್ತಕ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ "ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು" ಕೃತಿಯನ್ನು ಲೋಕಾರ್ಪಣೆಗೊಳಿಸಿ, ಅವರು ಮಾತನಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ 2028: ಇನ್ನು ಕರ್ನಾಟಕದ 2028ನೇ ಸಾಲಿನ ವಿಧಾನಸಭೆ ಚುನಾವಣೆಯ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಮಾತನಾಡಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಯ ಬೆನ್ನಲ್ಲೇ ಕರ್ನಾಟಕದ ಮುಂದಿನ ವಿಧಾನಸಭೆ ಚುನಾವಣೆಯ ಬಗ್ಗೆ ಮಾತನಾಡಿರುವುದು ಕುತೂಹಲ ಮೂಡಿಸಿದೆ. ಅಲ್ಲದೇ ಮುಂದಿನ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದೂ ಸಿದ್ದರಾಮಯ್ಯ ಅವರು ಹೇಳಿದ್ದರು. ಇದೀಗ ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದಿದ್ದಾರೆ.
ಮಹದಾಯಿ, ಕೃಷ್ಣಾ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ. ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲವಿದೆ.
ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದಿದ್ದಾರೆ.
ಮತ್ತೊಂದು ಕಡೆ ಕೃಷ್ಣಾ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ, ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ.
ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು ಎಂದಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications