Breaking: ಕರ್ನಾಟಕದಲ್ಲಿ 2000 ಗಡಿ ದಾಟಿದ ಕೊರೊನಾ ವೈರಸ್!

ಬೆಂಗಳೂರು, ಆಗಸ್ಟ್ 12: ಕರ್ನಾಟಕದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಮುಗೀತು ಎನ್ನುವಷ್ಟರಲ್ಲೇ ಹೊಸ ಪ್ರಕರಣ ಸಂಖ್ಯೆ 2000 ಗಡಿ ದಾಟಿದೆ. ಒಂದೇ ದಿನದ ಪಾಸಿಟಿವಿಟಿ ದರ ಶೇ.6.63ರಷ್ಟಾಗಿದೆ. ಇನ್ನು ಒಂದು ವಾರದ ಪಾಸಿಟಿವಿಟಿ ದರವು ಶೇ.6.32ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 2032 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ ಐವರು ಮೃತಪಟ್ಟಿದ್ದು, 1686 ಸೋಂಕಿತರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಇದುವರೆಗೂ ಒಟ್ಟು 4028117 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 3977541 ಸೋಂಕಿತರು ಗುಣಮುಖರಾಗಿದ್ದು, ರಾಜ್ಯದಲ್ಲಿ ಮಹಾಮಾರಿಗೆ ಈವರೆಗೆ 40139 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 10395 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲೇ 1202 ಮಂದಿಗೆ ಕೋವಿಡ್-19: ಇಡೀ ಕರ್ನಾಟಕದಲ್ಲಿ 2000 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದರೆ, ಅದರಲ್ಲಿ ಬೆಂಗಳೂರಿನದ್ದೇ ಸಿಂಹಪಾಲಿಗೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 1202 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

2032 New Corona virus Cases, 5 deaths reported In Karnataka in last 24 hours

ಈ ಜಿಲ್ಲೆಯಲ್ಲಿ ಇದುವರೆಗೂ 1850049 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, 1825968 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿಗೆ ಇದುವರೆಗೂ 16978 ಜನರು ಪ್ರಾಣ ಬಿಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ 7102 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+