ಮತ್ತೆ ಶಾಕ್: ಕರ್ನಾಟಕದಲ್ಲಿ ಒಂದೇ ದಿನ 2052 ಮಂದಿಗೆ ಕೊರೊನಾವೈರಸ್!

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಬುಧವಾರ 1531 ಪ್ರಕರಣಗಳು ಪತ್ತೆಯಾಗಿದ್ದ ರಾಜ್ಯದಲ್ಲಿ ಗುರುವಾರ 2,000ಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.37ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.70ರಷ್ಟಿದೆ.

ರಾಜ್ಯದಲ್ಲಿ ಒಂದು ದಿನದಲ್ಲಿ 2052 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1332 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 35 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36491 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2901247ಕ್ಕೆ ಏರಿಕೆಯಾಗಿದೆ. ಒಟ್ಟು 2841479 ಸೋಂಕಿತರು ಗುಣಮುಖರಾಗಿದ್ದು. 23253 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ 506 ಜನರಿಗೆ ಕೊವಿಡ್-19

ಸಿಲಿಕಾನ್ ಸಿಟಿಯಲ್ಲಿ 506 ಜನರಿಗೆ ಕೊವಿಡ್-19

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 506 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1226463ಕ್ಕೆ ಏರಿಕೆಯಾಗಿದೆ. 9 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15852ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8416 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 29,402 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,19,459 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,48,861 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 70,80,543 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,12,85,226 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,83,65,769 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊವಿಡ್-19?

ರಾಜ್ಯದಲ್ಲಿ ಒಟ್ಟು 2052 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 7, ಬಳ್ಳಾರಿ 8, ಬೆಳಗಾವಿ 37, ಬೆಂಗಳೂರು ಗ್ರಾಮಾಂತರ 33, ಬೆಂಗಳೂರು 506, ಬೀದರ್ 4, ಚಾಮರಾಜನಗರ 24, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 90, ಚಿತ್ರದುರ್ಗ 17, ದಕ್ಷಿಣ ಕನ್ನಡ 396, ದಾವಣಗೆರೆ 27, ಧಾರವಾಡ 10, ಗದಗ 3, ಹಾಸನ 136, ಹಾವೇರಿ 3, ಕಲಬುರಗಿ 10, ಕೊಡಗು 96, ಕೋಲಾರ 29, ಕೊಪ್ಪಳ 8, ಮಂಡ್ಯ 40, ಮೈಸೂರು 157, ರಾಯಚೂರು 2, ರಾಮನಗರ 3, ಶಿವಮೊಗ್ಗ 81, ತುಮಕೂರು 56, ಉಡುಪಿ 174, ಉತ್ತರ ಕನ್ನಡ 72, ವಿಜಯಪುರ 5, ಯಾದಗಿರಿ 3 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    Basavaraj Bommai ಯಲ್ಲಾಪುರದ ಕುಸಿದ ಸೇತುವೆಯನ್ನು ವೀಕ್ಷಿಸಿದರು | Oneindia Kannada
    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ರಾಜ್ಯದಲ್ಲಿ ಈವರೆಗೂ 7,58,978 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,40,269 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,15,916 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,30,749 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,18,62,950 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 49,66,206 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,34,13,995 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 62,87,037 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+