ಕರ್ನಾಟಕ 21,390, ಬೆಂಗಳೂರು 15,617 ಹೊಸ ಕೋವಿಡ್ ಪ್ರಕರಣ ಪತ್ತೆ

ಬೆಂಗಳೂರು, ಜನವರಿ 12; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617 ಹೊಸ ಪ್ರಕರಣ ಪತ್ತೆಯಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬುಧವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ 10.96ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 1,541 ಜನರು ಡಿಸ್ಚಾರ್ಜ್ ಆಗಿದ್ದಾರೆ, 10 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 93,009ಕ್ಕೆ ಏರಿಯಾಗಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 73 ಸಾವಿರ ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ 24 ಗಂಟೆಯಲ್ಲಿ 1,95,047 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ.

21,390 New Covid Cases Reported In Karnataka

ಯಾವ ಜಿಲ್ಲೆಯಲ್ಲಿ ಎಷ್ಟು?; ಬೆಂಗಳೂರು ನಗರದಲ್ಲಿ 15617 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸಕ್ರಿಯ ಪ್ರಕರಣಗಳು 73654. ಒಟ್ಟು ಪ್ರಕರಣಗಳ ಸಂಖ್ಯೆ 1334957. ಇದುವರೆಗೂ ನಗರದಲ್ಲಿ 16433 ಜನರು ಮೃತಪಟ್ಟಿದ್ದಾರೆ.

ಬಳ್ಳಾರಿ 180, ಬೆಳಗಾವಿ 269, ಬೆಂಗಳೂರು ಗ್ರಾಮಾಂತರ 310, ಬೀದರ್ 111, ಚಾಮರಾಜನಗರ 106, ಚಿಕ್ಕಬಳ್ಳಾಪುರ 141, ದಕ್ಷಿಣ ಕನ್ನಡ 519, ದಾವಣಗೆರೆ 137, ಧಾರವಾಡ 264, ಹಾಸನ 409 ಹೊಸ ಪ್ರಕರಣ ದಾಖಲಾಗಿದೆ.

ಕಲಬುರಗಿ 188, ಕೋಲಾರ 282, ಮಂಡ್ಯ 319, ಮೈಸೂರು 524, ರಾಮನಗರ 135, ಶಿವಮೊಗ್ಗ 201, ತುಮಕೂರು 594, ಉಡುಪಿ 361, ಉತ್ತರ ಕನ್ನಡ 199 ಹೊಸ ಪ್ರಕರಣಗಳು ಪತ್ತೆಯಾಗಿದೆ.

ಎರಡಂಕಿ ಪ್ರಕರಣಗಳು ಇರುವ ಜಿಲ್ಲೆಗಳು; ಯಾದಗಿರಿ 10, ವಿಜಯಪುರ 64, ರಾಯಚೂರು 91, ಕೊಪ್ಪಳ 47, ಕೊಡಗು 69, ಹಾವೇರಿ 14, ಗದಗ 43, ಚಿತ್ರದುರ್ಗ 86, ಚಿಕ್ಕಮಗಳೂರು 87, ಬಾಗಲಕೋಟೆ 13.

ಕರ್ನಾಟಕದ ಕೋವಿಡ್ ವರದಿ; ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 24 ಗಂಟೆಯಲ್ಲಿ 1541 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಡಿಸ್ಚಾರ್ಜ್ ಆದವರು 2968002.

ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 93,099. ಪಾಸಿಟಿಟಿ ದರ 10.96. 24 ಗಂಟೆಯಲ್ಲಿ 10 ಜನರು ಸಾವು. ಒಟ್ಟು ಮೃತಪಟ್ಟವರು 38389. ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ 0.04 ಆಗಿದೆ.

37,073 ಆಂಟಿಜೆನ್, 157974 ಆರ್‌ಟಿಪಿಸಿಆರ್ ಸೇರಿದಂತೆ 195047 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. ರಾಜ್ಯದಲ್ಲಿನ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 479 ಆಗಿದೆ.

ಬೆಂಗಳೂರು ನಗರದಲ್ಲಿ ಡಿಸೆಂಬರ್ 28 ರಿಂದ ಜನವರಿ 3ರ ತನಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂತು. ಒಂದು ವಾರದಲ್ಲಿ 6,448 ಪ್ರಕರಣ ದಾಖಲಾದರೆ, 23 ಸೋಂಕಿತರು ಮೃತಪಟ್ಟರು. ಜನವರಿ 4 ರಿಂದ 10ರ ತನಕ 51 ಸಾವಿರ ಕೋವಿಡ್ ಪ್ರಕರಣ ದಾಖಲಾಗಿದೆ. ಮಂಗಳವಾರ ನಗರದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ ದಾಟಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೋವಿಡ್ ಸೋಂಕು ತಗುಲಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ರಾಜ್ಯದ ಕೋವಿಡ್ ಸ್ಥಿತಿ-ಗತಿ ಕುರಿತು ಮಂಗಳವಾರ ಅವರು ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಕೋವಿಡ್ ಹರಡುವಿಕೆ ತಡೆಯಲು ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಜನವರಿ 31ರ ತನಕ ವಿಸ್ತರಣೆ ಮಾಡಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಶಾಲಾ ಮಕ್ಕಳಲ್ಲಿ ಸಹ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+