ಕರ್ನಾಟಕದಲ್ಲಿ 29470 ಕೊವಿಡ್-19 ಸಕ್ರಿಯ ಪ್ರಕರಣಗಳಷ್ಟೇ ಬಾಕಿ!

ಬೆಂಗಳೂರು, ನವೆಂಬರ್.12: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಒಂದು ದಿನದಲ್ಲಿ 2116 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 21 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11474ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಕೊರೊನಾವೈರಸ್ ಒಟ್ಟು 855912 ಸೋಂಕಿತ ಪ್ರಕರಣಗಳ ಪೈಕಿ 814949 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲೇ 3368 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 29470 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.

2116 New Coronavirus Cases Reported in Karnataka Today, State Tally Rise to 855912

ಎಷ್ಟು ಮಂದಿಗೆ ಕೊರೊನಾವೈರಸ್ ಪರೀಕ್ಷೆ?:

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಸಾರ್ವಜನಿಕರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸುವುದು ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 27286 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 88100 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 115386 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 90,43,217 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

ಜಿಲ್ಲೆವಾರು ಕೊರೊನಾವೈರಸ್ ಕೇಸ್?:

ರಾಜ್ಯದಲ್ಲಿ ಒಟ್ಟು 2116 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 14, ಬಳ್ಳಾರಿ 41, ಬೆಳಗಾವಿ 54, ಬೆಂಗಳೂರು ಗ್ರಾಮಾಂತರ 43, ಬೆಂಗಳೂರು 1069, ಬೀದರ್ 3, ಚಾಮರಾಜನಗರ 12, ಚಿಕ್ಕಬಳ್ಳಾಪುರ 24, ಚಿಕ್ಕಮಗಳೂರು 37, ಚಿತ್ರದುರ್ಗ 41, ದಕ್ಷಿಣ ಕನ್ನಡ 53, ದಾವಣಗೆರೆ 29, ಧಾರವಾಡ 18, ಗದಗ 5, ಹಾಸನ 100, ಹಾವೇರಿ 6, ಕಲಬುರಗಿ 51, ಕೊಡಗು 8, ಕೋಲಾರ 18, ಕೊಪ್ಪಳ 28, ಮಂಡ್ಯ 74, ಮೈಸೂರು 115, ರಾಯಚೂರು 9, ರಾಮನಗರ 12, ಶಿವಮೊಗ್ಗ 51, ತುಮಕೂರು 80, ಉಡುಪಿ 31, ಉತ್ತರ ಕನ್ನಡ 32, ವಿಜಯಪುರ 51, ಯಾದಗಿರಿ 7, ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+