ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ಧಕ್ಕಿಂತ ಹೆಚ್ಚು ಸೋಂಕಿತರು ಗುಣಮುಖ: ಆರೋಗ್ಯ ಇಲಾಖೆ ಮಾಹಿತಿ

|
Google Oneindia Kannada News

ಬೆಂಗಳೂರು, ಜೂ. 15: ರಾಜ್ಯದಲ್ಲಿ ಕಳೆದ ಒಂದೇ ದಿನದಲ್ಲಿ ಹೊಸದಾಗಿ ಮತ್ತೆ 213 ಜನರಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಜೊತೆಗೆ ವಿವಿಧ ಆಸ್ಪತ್ರೆಗಳಿಂದ 180 ಸೋಂಕಿತರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.

Recommended Video

ಕರೋನ ವೈರಸ್ ಪವರ್ ಕಡಿಮೆ ಅಗಿದ್ಯಂತೆ | Oneindia Kannada

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,213ಕ್ಕೆ ಏರಿಕೆ ಆಗಿದ್ದರೂ ಗುಣಮುಖರಾದವರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಸೋಂಕಿನಿಂದ ಬಳಲುತ್ತಿದ್ದ 4,135 ಜನರು ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳಲ್ಲಿ 2,987 ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಇದು ನೆಮ್ಮದಿ ಕೊಡುವಂತಹ ಸಂಗತಿಯೆ ಆದರೂ ಕೂಡ ಮತ್ತೊಂದು ವಿಷಯ ಸರ್ಕಾರ ಹಾಗೂ ಜನಸಾಮಾನ್ಯರು ಕಂಗೆಡುವಂತೆ ಮಾಡಿದೆ.

ತೀವ್ರಗೊಂಡ ಸೋಂಕು: ಕ್ವಾರಂಟೈನ್ ನಿಯಮಾವಳಿ ಬದಲಿಸಿದ ರಾಜ್ಯ ಸರ್ಕಾರತೀವ್ರಗೊಂಡ ಸೋಂಕು: ಕ್ವಾರಂಟೈನ್ ನಿಯಮಾವಳಿ ಬದಲಿಸಿದ ರಾಜ್ಯ ಸರ್ಕಾರ

 Coronavirus infection has been confirmed in 213 new people in the state in the last 24 hours

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿ ತೀವ್ರ ಏರಿಕೆ:

ಕೊರೊನಾ ವೈರಸ್‌ ಸೋಂಕಿನಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 56 ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಜೊತೆಗೆ ಈ ವರೆಗೆ ಕೊರೊನಾ ವೈರಸ್‌ಗೆ 88 ಜನರು ಬಲಿಯಾಗಿದ್ದಾರೆ. ಇಂದು ಇಬ್ಬರು ಮೃತರಾಗಿದ್ದಾರೆಂದು ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.

 Coronavirus infection has been confirmed in 213 new people in the state in the last 24 hours

ಈ ವರೆಗೆ ಒಟ್ಟು 4,49,331 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಅದರಲ್ಲಿ 4,32,346 ವರದಿಗಳು ನೆಗೆಟಿವ್ ಎಂದು ಬಂದಿವೆ. ಕಳೆದ ಒಂದು ದಿನದಲ್ಲಿ ಒಟ್ಟು 5,362 ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 4,738 ನೆಗೆಟಿವ್ ಎಂದು ದೃಢಪಟ್ಟಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.

English summary
Coronavirus infection has been confirmed in 213 new people in the state in the last 24 hours. The total number of infected persons in the state has increased to 7,213.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X