Election: ಕೊನೆಯ ದಿನ 224 ನಾಮಪತ್ರ ಸಲ್ಲಿಕೆ: ಸಲ್ಲಿಕೆಯಾದ ಒಟ್ಟು ನಾಮಪತ್ರಗಳೆಷ್ಟು? ಆಸ್ತಿ ಅಂಕಿ-ಸಂಖ್ಯೆ
ಬೆಂಗಳೂರು, ಏಪ್ರಿಲ್ 05: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಅವಧಿ ಗುರುವಾರಕ್ಕೆ ಮುಕ್ತಾಯಗೊಂಡಿದೆ. ಕೊನೆಯ ದಿನ ಏಪ್ರಿಲ್ 04ರಂದು 183 ಅಭ್ಯರ್ಥಿಗಳು ಬರೋಬ್ಬರಿ 224 ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಪ್ರಿಲ್ 4ರವರೆಗೆ ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಏಪ್ರಿಲ್ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇದುವರೆಗೆ ಒಟ್ಟು 358 ಮಂದಿ ಅಭ್ಯರ್ಥಿಗಳು ಹದಿನಾಲ್ಕು ಕ್ಷೇತ್ರಗಳಿಂದ ಒಟ್ಟು 492 ಉಮೇದುವಾರಿಕೆಗಳನ್ನು ಸಲ್ಲಿಸಿದ್ದಾರೆ.

ಬಹುತೇಕ ಎಲ್ಲ ಪಕ್ಷಗಳ ಅಭ್ಯರ್ಥಿಗಳು ತಮ್ಮ ಸಹ ನಾಯಕರು ಮತ್ತು ನೂರಾರು ಕಾರ್ಯಕರ್ತರ ಜೊತೆಗೆ ಚುನಾವಣಾ ಪ್ರಚಾರ ಮುಖೇನ ಬೃಹತ್ ರೋಡ್ ಶೋ ಮೂಲಕ ಬಂದು ಗುರುವಾರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಏ. 5ಕ್ಕೆ ನಾಮಪತ್ರ ಪರಿಶೀಲನೆ
ಅಭ್ಯರ್ಥಿಗಳ ನಾಮಪತ್ರ ಇಂದು ಏಪ್ರಿಲ್ 5ರಂದು ಶುಕ್ರವಾರ ಪರಿಶೀಲನೆಗೊಳ್ಳಲಿವೆ. ಏಪ್ರಿಲ್ 8ರಂದು ನಾಮಪತ್ರ ವಾಪಾಸ್ ಪಡೆಯಲು ಅವಕಾಶ ನೀಡಲಾಗಿದೆ. ಕೊನೆಯ ದಿನದ ನಾಮಪತ್ರ ಸಲ್ಲಿಕೆ ಭರಾಟೆ ನೋಡಲು ಎರಡು ಕಣ್ಣು ಸಾಲದು ಎಂಬಂತಿತ್ತು.
ಚುನಾವಣಾ ಕಣ ರಂಗೇರುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಪ್ರಚಾರ ಕಾರ್ಯಗಳು ಎಲ್ಲೆಡೆ ಬರದಿಂದ ಸಾಗಿವೆ.

ಕೊನೆ ದಿನ ನಾಮಪತ್ರ ಸಲ್ಲಿಸಿದ ಪ್ರಮುಖರು
ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್‌ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯ ಡಾ.ಸಿಎನ್ ಮಂಜುನಾಥ್, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಂಸದ ತೇಜಸ್ವಿ ಸೂರ್ಯ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಹಾನದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ, ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಗೋವಿಂದ ಕಾರಜೋಳ, ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಮಲ್ಲೇಶ್ ಬಾಬು, ತುಮಕೂರಿನಲ್ಲಿ ಕಾಂಗ್ರೆಸ್‌ನಿಂದ ಮುದ್ದಹನುಮೇ ಗೌಡ, ಚಿಕ್ಕಬಳ್ಳಾಪುರದಿಂದ ಬಿಜೆಪಿಯಿಂದ ಡಾ.ಕೆ.ಸುಧಾಕರ್ ಸೇರಿದಂತೆ ಘಟಾನುಘಟಿ ನಾಯಕರು ಅಂತಿಮ ಉಮೇದುವಾರಿಕೆ ಸಲ್ಲಿಸಿದರು.
ಘಟಾನುಘಟಿಗಳ ಆಸ್ತಿ ಘೋಷಣೆ
ಚುನಾವಣಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಜೊತೆಗೆ ತಮ್ಮ ಆಸ್ತಿ ಚರಾಸ್ತಿ, ಸ್ಥಿರಾಸ್ತಿ ಎಷ್ಟಿದೆ, ಚಿನ್ನಾಭರಣ, ನಗದು ಎಷ್ಟಿದೆ? ಎಂಬೆಲ್ಲ ಮಾಹಿತಿಯನ್ನು ಬಹಿರಂಗಪಡಿಸಿದರು. ಕುಮಾರಸ್ವಾಮಿ ಅವರು ರೂ.219 ಕೋಟಿ ಆಸ್ತಿ ಒಡೆಯನೆಂದು ಘೋಷಿಸಿದರು. ಅದೇ ರೀತಿ ಡಾ.ಸಿಎನ್ ಮಂಜುನಾಥ್ ರೂ.96 ಕೋಟಿ, ಬಿ.ಎನ್. ಚಂದ್ರಪ್ಪ ಅವರು ರೂ. 10.5 ಕೋಟಿ, ಮುದ್ದಹನುಮೇಗೌಡ ರೂ. 9.8 ಕೋಟಿ, ತೇಜಸ್ವಿ ಸೂರ್ಯ ರೂ.4.1 ಕೋಟಿ ರೂ. ಹಾಗೂ ಗೋವಿಂದ ಕಾರಜೋಳ ಅವರು ರೂ.3.2 ಕೋಟಿ ಆಸ್ತಿ ಒಡೆಯ ಎಂದು ನಾಮಪತ್ರದಲ್ಲಿ ಉಲ್ಲೇಖಿಸಿದ್ದಾರೆ.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications