ಕರ್ನಾಟಕದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ನಿಮಗೆಷ್ಟು ಗೊತ್ತು?

ಬೆಂಗಳೂರು, ಜುಲೈ 09: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 2,000 ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.48ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.96ರಷ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 68 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 35,731 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 2,290 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,045 ಸೋಂಕಿತರು ಗುಣಮುಖರಾಗಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ. ಈವರೆಗೂ 27,93,498 ಸೋಂಕಿತರು ಗುಣಮುಖರಾಗಿದ್ದು. 37,906 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 472 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,18,493ಕ್ಕೆ ಏರಿಕೆಯಾಗಿದೆ. 12 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,723ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 13536 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 31,454 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,22,286 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,53,740 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 65,22,332 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,91,07,722 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,56,30,054 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 2290 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 13, ಬೆಳಗಾವಿ 87, ಬೆಂಗಳೂರು ಗ್ರಾಮಾಂತರ 63, ಬೆಂಗಳೂರು 472, ಬೀದರ್ 1, ಚಾಮರಾಜನಗರ 43, ಚಿಕ್ಕಬಳ್ಳಾಪುರ 17, ಚಿಕ್ಕಮಗಳೂರು 69, ಚಿತ್ರದುರ್ಗ 30, ದಕ್ಷಿಣ ಕನ್ನಡ 209, ದಾವಣಗೆರೆ 32, ಧಾರವಾಡ 27, ಗದಗ 5, ಹಾಸನ 228, ಹಾವೇರಿ 11, ಕಲಬುರಗಿ 6, ಕೊಡಗು 113, ಕೋಲಾರ 67, ಕೊಪ್ಪಳ 10, ಮಂಡ್ಯ 95, ಮೈಸೂರು 216, ರಾಯಚೂರು 2, ರಾಮನಗರ 14, ಶಿವಮೊಗ್ಗ 152, ತುಮಕೂರು 115, ಉಡುಪಿ 131, ಉತ್ತರ ಕನ್ನಡ 55, ವಿಜಯಪುರ 2, ಯಾದಗಿರಿ 5 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಡೆಲ್ಟಾ ಸ್ವರೂಪದ ಕೊರೊನಾದಿಂದ ಇವರಿಗೆಲ್ಲ ಅಪಾಯ ಜಾಸ್ತಿ | Oneindia Kannada
    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

    ರಾಜ್ಯದಲ್ಲಿ ಈವರೆಗೂ 7,55,092 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,14,603 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 8,63,426 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,65,547 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,11,99,640 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 35,64,910 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,06,59,958 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 45,47,882 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+