ಮಂಡ್ಯ ನಗರಕ್ಕೆ 24 ಗಂಟೆ ಕುಡಿಯುವ ನೀರು

ಮಂಡ್ಯ, ಮೇ 12 : ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿನ ಜನರಿಗೆ ಕೆಲವೇ ದಿನಗಳಲ್ಲಿ ದಿನದ 24 ಗಂಟೆಯೂ ಕುಡಿಯುವ ನೀರು ದೊರೆಯಲಿದೆ. ನಗರದ ನೀರು ಪೂರೈಕೆ ಮಾಡುವ ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಮಂಡ್ಯ ನಗರ ಸಭೆ ವ್ಯಾಪ್ತಿಯಲ್ಲಿ 24 ಗಂಟೆ ಕುಡಿಯುವ ನೀರು ಪೂರೈಕೆ ಮಾಡುವ ಈ ಯೋಜನೆಗೆ ಕೇಂದ್ರ ಸರ್ಕಾರ 151.75 ಕೋಟಿ ರೂ. ಅನುದಾನ ನೀಡಲಿದೆ. ನಗರ ಅಭಿವೃದ್ಧಿ ಯೋಜನೆ ಅನುದಾನದಲ್ಲಿ ಈ ನೀರಿನ ಯೋಜನೆಗೆ ಒಪ್ಪಿಗೆ ದೊರಕಿದ್ದು, ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ.

Drinking Water

ಈ ಕುಡಿಯುವ ನೀರು ಯೋಜನೆಗೆ ಶೇ 80ರಷ್ಟು ಅನುದಾನವನ್ನು ಕೇಂದ್ರ ಸರ್ಕಾರ ನೀಡಲಿದೆ. ಉಳಿದಂತೆ ರಾಜ್ಯ ಸರ್ಕಾರ ಶೇ 10 ಮತ್ತು ನಗರ ಸಭೆ ಶೇ 10ರಷ್ಟು ಅನುದಾನ ನೀಡಲಿವೆ. ಯೋಜನೆ ಕಾಮಗಾರಿಗಾಗಿ 60.70 ಮೊದಲ ಹಂತದಲ್ಲಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ. [ಕುಡಿಯುವ ನೀರು ಪೂರೈಕೆಗಾಗಿ ಪ್ರತ್ಯೇಕ ಖಾತೆ]

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಮೇ 16ರ ಬಳಿಕ ಈ ಯೋಜನೆ ಕಾಮಗಾರಿಗಾಗಿ ಟೆಂಡರ್ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಕರ್ನಾಟಕ ನೀರು ಸರಬರಾರು ಮತ್ತು ಒಳಚರಂಡಿ ಮಂಡಳಿ ಯೋಜನೆಯ ಉಸ್ತುವಾರಿ ನೋಡಿಕೊಳ್ಳಲಿದೆ.

ಅಗತ್ಯ ವ್ಯವಸ್ಥೆ ಇದೆ : ಮಂಡ್ಯ ನಗರಸಭೆಯಲ್ಲಿ ಸದ್ಯ ಪ್ರತಿದಿನ 35 ಎಂಎಲ್ ಡಿ ನೀರು ಸಂಗ್ರಹವಾಗುತ್ತಿದೆ. ಇದರಲ್ಲಿ 21 ಎಂಎಲ್ ಡಿ ನೀರನ್ನು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಉಳಿದ ನೀರನ್ನು ಸರಿಯಾಗಿ ಉಪಯೋಗಿಸಿಕೊಂಡು 24 ಗಂಟೆಯೂ ನೀರು ಪೂರೈಕೆ ಮಾಡಲು ಈ ಯೋಜನೆ ತಯಾರಿಸಲಾಗಿದೆ.

ಮಂಡ್ಯ ನಗರಸಭೆ ಜನಸಾಂದ್ರತೆ ಪ್ರತಿ ವರ್ಷ ಹೆಚ್ಚಾಗುತ್ತಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ತಯಾರಿಸಲಾಗಿದೆ. 2011ರ ಜನಗಣತಿ ಪ್ರಕಾರ ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ 1.4 ಲಕ್ಷ ಜನರಿದ್ದಾರೆ. ಮುಂದಿನ ಕೆಲವು ವರ್ಷಗಳಲ್ಲಿ ಇದು 3ಲಕ್ಷಕ್ಕೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ನಗರಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+