ಕರ್ನಾಟಕದಲ್ಲಿ ಕಡಿಮೆಯಾಯ್ತಾ ಕೊರೊನಾವೈರಸ್; ಇಲ್ಲಿದೆ ಅಂಕಿ-ಅಂಶ!

ಬೆಂಗಳೂರು, ಮೇ 27: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ನಲುಗಿನ ಕರ್ನಾಟಕದಲ್ಲಿ ಮೂರನೇ ಅಲೆಯನ್ನು ಎದುರಿಸುವುದಕ್ಕೆ ಸಿದ್ಧತೆ ಜೋರಾಗಿ ನಡೆದಿದೆ. ಇದರ ಮಧ್ಯೆ ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ಮತ್ತೊಂದು ದಾಖಲೆ ಬರೆದಿದೆ.

ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 476 ಮಂದಿ ಜೀವ ಕಳೆದುಕೊಂಡಿದ್ದು, ಇದುವರೆಗೂ 27,405 ಸೋಂಕಿತರು ಮೃತಪಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲೇ 24214 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 31,459 ಸೋಂಕಿತರು ಗುಣಮುಖರಾಗಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 25,23,998 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 20,94,369 ಸೋಂಕಿತರು ಗುಣಮುಖರಾಗಿದ್ದು, 4,02,203 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಕೊವಿಡ್-19 ಪರೀಕ್ಷೆ ಪ್ರಮಾಣ ಎಷ್ಟು?

ಕರ್ನಾಟಕದಲ್ಲಿ ಕೊವಿಡ್-19 ಪರೀಕ್ಷೆ ಪ್ರಮಾಣ ಎಷ್ಟು?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚುತ್ತಿದೆ ಎಂದು ನಿರಾತಂಕದಿಂದ ಇರುವಂತಿಲ್ಲ. ರಾಜ್ಯದಲ್ಲಿ ಕೊವಿಡ್-19 ಪರೀಕ್ಷೆ ಸಂಖ್ಯೆ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 29,885 ಜನರಿಗೆ ರಾಪಿಡ್ ಆಂಟಿಜೆನಿಕ್ ಪರೀಕ್ಷೆ ನಡೆಸಲಾಗಿದೆ. 1,07,758 ಜನರಿಗೆ RT-PCR ತಪಾಸಣೆ ನಡೆಸಲಾಗಿದ್ದು, ಒಂದು ದಿನದಲ್ಲಿ ಒಟ್ಟು 1,37,643 ಮಂದಿಗೆ ಮಾತ್ರ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ.

ರಾಜ್ಯ ರಾಜಧಾನಿಯಲ್ಲಿ ತಗ್ಗಿದ ಕೊವಿಡ್-19 ಅಪಾಯ

ರಾಜ್ಯ ರಾಜಧಾನಿಯಲ್ಲಿ ತಗ್ಗಿದ ಕೊವಿಡ್-19 ಅಪಾಯ

ಕೊರೊನಾವೈರಸ್ ಸೋಂಕಿನಿಂದ ತತ್ತರಿಸಿದ ಬೆಂಗಳೂರಿನಲ್ಲಿ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಸಿಲಿಕಾನ್ ಸಿಟಿಯಲ್ಲಿ ಒಂದು ದಿನದಲ್ಲಿ 5949 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,43,878ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 273 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 12,421ಕ್ಕೆ ಏರಿಕೆಯಾಗಿದೆ. 2,06,390 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

ರಾಜ್ಯದಲ್ಲಿ ಒಟ್ಟು 24214 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 214, ಬಳ್ಳಾರಿ 725, ಬೆಳಗಾವಿ 1147, ಬೆಂಗಳೂರು ಗ್ರಾಮಾಂತರ 623, ಬೆಂಗಳೂರು 5949, ಬೀದರ್ 60, ಚಾಮರಾಜನಗರ 380, ಚಿಕ್ಕಬಳ್ಳಾಪುರ 238, ಚಿಕ್ಕಮಗಳೂರು 715, ಚಿತ್ರದುರ್ಗ 710, ದಕ್ಷಿಣ ಕನ್ನಡ 555, ದಾವಣಗೆರೆ 806, ಧಾರವಾಡ 678, ಗದಗ 370, ಹಾಸನ 1505, ಹಾವೇರಿ 159, ಕಲಬುರಗಿ 153, ಕೊಡಗು 337, ಕೋಲಾರ 591, ಕೊಪ್ಪಳ 495, ಮಂಡ್ಯ 755, ಮೈಸೂರು 2240, ರಾಯಚೂರು 445, ರಾಮನಗರ 263, ಶಿವಮೊಗ್ಗ 822, ತುಮಕೂರು 1219, ಉಡುಪಿ 905, ಉತ್ತರ ಕನ್ನಡ 659, ವಿಜಯಪುರ 306, ಯಾದಗಿರಿ 190 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    ಮುಂದೊಂದು ದಿನ BY Vijayendra ರಾಜ್ಯದ ಮುಖ್ಯಮಂತ್ರಿಯಾಗ್ತಾರೆ.. | Oneindia Kannada
    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ಕರ್ನಾಟಕದಲ್ಲಿ ಈವರೆಗೂ 7,13,480 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,68,437 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 5,83,603 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,05,637 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 82,28,534 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 19,91,063 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಇದುವರೆಗೂ 1,27,54,056 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+