247 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಯಾವ ನಗರಕ್ಕೆ ಎಷ್ಟು?

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 06 : ಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆ ಬಗ್ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಂತೆ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕ್ಯಾಂಟೀನ್‌ ನಿರ್ಮಾಣವಾಗಲಿದೆ. ಕ್ಯಾಂಟೀನ್ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.

ಸರ್ಕಾರ ಕೆಲವು ದಿನಗಳ ಹಿಂದೆ ಘೋಷಣೆ ಮಾಡಿದಂತೆ 247 ಕ್ಯಾಂಟೀನ್‌ಗಳು ಸ್ಥಾಪನೆಯಾಗಲಿವೆ. ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ನಗರದಲ್ಲಿ ಪ್ರತಿ ಲಕ್ಷ ಜನಸಂಖ್ಯೆಗೆ ಒಂದು ಕ್ಯಾಂಟೀನ್ ಹೆಚ್ಚುವರಿಯಾಗಿ ನಿರ್ಮಾಣ ಮಾಡಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಇಂದಿರಾ ಕ್ಯಾಂಟೀನ್‌ನಲ್ಲಿ 1.50ರೂ.ಗೆ ಕಾಫಿ, ಟೀ

247 Indira Canteen to set up all over the state

ಒಂದು ಅಥವ ಎರಡು ಕ್ಯಾಂಟೀನ್ ಅಗತ್ಯ ಇರುವ ನಗರದಲ್ಲಿ ಅಡುಗೆ ಕೋಣೆ ಹೊಂದಿರುವ ಕ್ಯಾಂಟೀನ್, 2ಕ್ಕೂ ಹೆಚ್ಚಿನ ಕ್ಯಾಂಟೀನ್ ಅಗತ್ಯವಿದ್ದರೆ ಪ್ರತ್ಯೇಕ ಅಡುಗೆ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ. ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳ ಅನುಷ್ಠಾನಕ್ಕೆ ಪೌರಾಡಳಿತ ನಿರ್ದೇಶನಾಲಯ ರಾಜ್ಯ ಮಟ್ಟದ ನೋಡೆಲ್ ಸಂಸ್ಥೆ ಕಾರ್ಯ ನಿರ್ವಹಣೆ ಮಾಡಲಿದೆ.

ಇಂದಿರಾ ಕ್ಯಾಂಟೀನ್ ಇಲ್ಲದ ವಾರ್ಡ್‌ನಲ್ಲಿ ಮೊಬೈಲ್ ಕ್ಯಾಂಟೀನ್

ಊಟ, ಉಪಹಾರದ ಮಿತಿ

* 25 ಸಾವಿರ ಜನಸಂಖ್ಯೆ ಹೊಂದಿರುವ ಪಟ್ಟಣದಲ್ಲಿ ಒಂದು ಹೊತ್ತಿಗೆ 200 ಜನ
* 45 ಸಾವಿರ ಜನಸಂಖ್ಯೆ ಹೊಂದಿದ್ದರೆ 300 ಜನ
* 45 ಸಾವಿರದಿಂದ 1 ಲಕ್ಷ ಜನಸಂಖ್ಯೆ ಇದ್ದರೆ 500 ಜನರಿಗೆ ಊಟ, ಉಪಹಾರ ನೀಡಬೇಕು

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ

ಯಾವ ನಗರಕ್ಕೆ ಎಷ್ಟು ಕ್ಯಾಂಟೀನ್? : ಮೈಸೂರು 11, ತುಮಕೂರು 4, ದಾವಣಗೆರೆ 8, ಶಿವಮೊಗ್ಗ 4, ಮಂಗಳೂರು 5, ಬೆಳಗಾವಿ 6, ವಿಜಯಪುರ 4, ಧಾರವಾಡ 12, ಕಲಬುರಗಿ 7, ರಾಯಚೂರು 3, ಬೀದರ್ 3, ಬಳ್ಳಾರಿ 5, ಹೊಸಪೇಟೆಯಲ್ಲಿ 3 ಇಂದಿರಾ ಕ್ಯಾಂಟೀನ್ ತೆರೆಯಲಾಗುತ್ತದೆ. ಈ ಕ್ಯಾಂಟೀನ್‌ಗಳಲ್ಲಿ ಪ್ರತ್ಯೇಕ ಅಡುಗೆ ಕೋಣೆಗಳನ್ನು ನಿರ್ಮಿಸಿ ಕ್ಯಾಂಟೀನ್‌ಗೆ ಆಹಾರ ಪೂರೈಕೆ ಮಾಡಲಾಗುತ್ತದೆ.

ಹಾಸನ, ರಾಮನಗರ, ಚಿತ್ರದುರ್ಗ, ಮಂಡ್ಯ, ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ಗದಗ ಮತ್ತು ಭದ್ರಾವತಿಯಲ್ಲಿ 2 ಅಡುಗೆ ಮನೆ ಸಹಿತ ಇಂದಿರಾ ಕ್ಯಾಂಟೀನ್‌ ನಿರ್ಮಾಣವಾಗಲಿದೆ. ಉಳಿದ ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿ ತಲಾ 1 ಅಡುಗೆ ಮನೆ ಸಹಿತ ಕ್ಯಾಂಟೀನ್ ನಿರ್ಮಾಣವಾಗಲಿದೆ.

ಕ್ಯಾಂಟೀನ್‌ಗಳಿಗೆ ಆಹಾರ ಸರಬರಾಜುದಾರರ ಆಯ್ಕೆಗೆ ಟೆಂಡರ್ ಪ್ರಕ್ರಿಯೆ ನಡೆಸಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಆಹಾರ ಪೂರೈಕೆಗೆ ತಗಲುವ ಸಹಾಯಧನದ ಮೊತ್ತದಲ್ಲಿ ಶೇ 30ರಷ್ಟನ್ನು ಕಾರ್ಮಿಕ ಇಲಾಖೆ, ಶೇ 70ರಷ್ಟನ್ನು ನಗರ ಸ್ಥಳೀಯ ಸಂಸ್ಥೆಗಳ ಅನುದಾನದಲ್ಲಿ ಭರಿಸಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government to set up 247 Indira Canteens all over the state. Indira Canteen project successful in Bengaluru city. New canteen will open on January 1, 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ