ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ 24x7 ತುರ್ತು ವೈದ್ಯಕೀಯ ಸೇವೆ ಲಭ್ಯ

ಬೆಂಗಳೂರು, ಏಪ್ರಿಲ್ 5: ಕರ್ನಾಟಕದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅದರ ಮೇಲ್ದರ್ಜೆಯ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಗಳ ಕಾಲ ತುರ್ತು ವೈದ್ಯಕೀಯ ಸೇವೆಗಳು ಸಾರ್ವಜನಿಕರಿಗೆ ಲಭ್ಯವಿರಲಿವೆ.

ಈ ಕುರಿತು ಕ್ರಮ ಕೈಗೊಳ್ಳಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಸಮುದಾಯ ಆರೋಗ್ಯ ಹಾಗೂ ಅದರ ಮೇಲ್ದರ್ಜೆಯ ಆಸ್ಪತ್ರೆಗಳಲ್ಲಿನ ತುರ್ತು ಸೇವೆಗಳ ಸಿಬ್ಬಂದಿಗಳಾದ ವೈದ್ಯಾಧಿಕಾರಿಗಳು, ಶುಶ್ರೂಷಾಧಿಕಾರಿಗಳು ಹಾಗೂ ಗ್ರೂಪ್ 'ಡಿ' ನೌಕರರು ಕರ್ತವ್ಯದಲ್ಲಿ ಹಾಜರಿರತಕ್ಕದ್ದು ಎಂದು ಸೂಚಿಸಲಾಗಿದೆ.

24x7 Emergency Medical Service Will Be Available At Govt Hospitals

ಕರ್ತವ್ಯದ ಪಾಳಿ ಮುಗಿದ ನಂತರ ಮತ್ತೊಬ್ಬ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗುವವರೆಗೆ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಾಗೂ ತುರ್ತು ಸೇವೆಗಳು ಲಭ್ಯವಿರುವಂತೆ ಅಗತ್ಯ ಕ್ರಮ ವಹಿಸುವುದು ಹಾಗೂ ಕಾರ್ಯ ವೇಳಾಪಟ್ಟಿಯನ್ನು ತಪ್ಪದೇ ಪಾಲಿಸತಕ್ಕದ್ದು ಎಂದು ಸೂಚನೆ ನೀಡಿದ್ದಾರೆ.

24x7 Emergency Medical Service Will Be Available At Govt Hospitals

ದಿನದ 24 ಗಂಟೆಗಳ ಕಾಲ ತುರ್ತು ವೈದ್ಯಕೀಯ ಸೇವೆ ವಿಷಯವನ್ನು ಗಂಭೀರವಾಗಿ ಪರಿಗಣಿಸತಕ್ಕದ್ದು, ಇಲ್ಲವಾದಲ್ಲಿ ಸಂಬಂಧಪಟ್ಟ ಆರೋಗ್ಯ ಸಂಸ್ಥೆಯ ಆಡಳಿತ ವೈದ್ಯಾಧಿಕಾರಿಯನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಎಚ್ಚರಿಕೆ ನೀಡಿದ್ದಾರೆ.

Recommended Video

      ಕರ್ನಾಟಕ ಬದಲಾಗಬೇಕೆಂದರೆ AAP ಬರಲೇಬೇಕು | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+