ಕರ್ನಾಟಕ; 25,005 ಹೊಸ ಕೋವಿಡ್ ಪ್ರಕರಣ ದಾಖಲು
ಬೆಂಗಳೂರು, ಜನವರಿ 13; ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ.
New cases cross 25k in Karnataka and 18k in Bengaluru:
— Dr Sudhakar K (@mla_sudhakar) January 13, 2022
◾New cases in State: 25,005
◾New cases in B'lore: 18,374
◾Positivity rate in State: 12.39%
◾Discharges: 2,363
◾Active cases State: 1,15,733 (B'lore- 91k)
◾Deaths:08 (B'lore- 03)
◾Tests: 2,01,704#COVID19 #Omicron
ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733ಕ್ಕೆ ಏರಿಕೆಯಾಗಿದೆ. ಇದರಲ್ಲಿ ಬೆಂಗಳೂರು ನಗರದಲ್ಲಿಯೇ 91 ಸಾವಿರ ಸಕ್ರಿಯ ಪ್ರಕರಣಗಳಿವೆ.
ಕರ್ನಾಟಕದ ಕೋವಿಡ್ ವರದಿ; 24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.
ಬೆಂಗಳೂರು ವರದಿ; ಬೆಂಗಳೂರು ನಗರದಲ್ಲಿ 18374 ಹೊಸ ಕೋವಿಡ್ ಪ್ರಕರಣ ದಾಖಲು. ಒಟ್ಟು ಸಕ್ರಿಯ ಪ್ರಕರಣ 90893. ಒಟ್ಟು ಮೃತಪಟ್ಟವರು 16436. ಒಟ್ಟು ಪ್ರಕರಣಗಳ ಸಂಖ್ಯೆ 1353331.
ಯಾವ ಜಿಲ್ಲೆಯಲ್ಲಿ ಎಷ್ಟು?; ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರ್ನಾಟಕ ಸೇರಿದಂತೆ 8 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆಯನ್ನು ನಡೆಸಿದರು.
ಕೋವಿಡ್ ಸೋಂಕು ತಗುಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೋಂ ಐಸೋಲೇಷನ್‌ನಲ್ಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳು ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದ ಕೋವಿಡ್ ಪರಿಸ್ಥಿತಿ ಕುರಿತು ಮುಖ್ಯಮಂತ್ರಿಗಳು ಪ್ರಧಾನಿಗೆ ವಿವರಣೆ ನೀಡಿದರು.
ಕರ್ನಾಟಕ ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಡಿಸೆಂಬರ್ 28ರಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. ಜನವರಿ 31ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ.
ಜನವರಿ 6ರಿಂದ ಜಾರಿಗೆ ಬರುವಂತೆ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ನೈಟ್ ಕರ್ಫ್ಯೂ ಜೊತೆಗೆ ವಾರಾಂತ್ಯದ ಕರ್ಫ್ಯೂ ಜಾರಿಗೆ ತರಲಾಗಿದೆ. ಬೆಂಗಳೂರು ನಗರದಲ್ಲಿ 1-9ನೇ ತರಗತಿಗೆ ಭೌತಿಕ ತರಗತಿಗಳನ್ನು ಬಂದ್ ಮಾಡಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಸೀಟು ಭರ್ತಿಗೆ ಆದೇಶ ಹೊರಡಿಸಲಾಗಿದೆ. ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಬಸ್, ನಮ್ಮ ಮೆಟ್ರೋದಲ್ಲಿ ನಿಗದಿತ ಸೀಟುಗಳನ್ನು ಮಾತ್ರ ಭರ್ತಿ ಮಾಡಲು ಅವಕಾಶ ನೀಡಲಾಗಿದೆ.












Click it and Unblock the Notifications