ಕರ್ನಾಟಕ; 25,795 ಹೊಸ ಕೋವಿಡ್ ಪ್ರಕರಣ ದಾಖಲು

ಬೆಂಗಳೂರು, ಏಪ್ರಿಲ್ 22; ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 25,795 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ.

ಆರೋಗ್ಯ ಇಲಾಖೆ ಗುರುವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,96,236ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 123 ಜನರು ಸಾವು ಮೃತಪಟ್ಟಿದ್ದು, 5,624 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ.

ಇದುವರೆಗೂ ರಾಜ್ಯದಲ್ಲಿ 1037857 ಜನರು ಗುಣಮುಖಗೊಂಡಿದ್ದಾರೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 12,47,997ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 243 ಜನರು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

25,795 New COVID-19 Cases Reported In Karnataka

ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13,885. ರಾಜ್ಯದಲ್ಲಿನ ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 15.87ರಷ್ಟಿದೆ. ಮೃತಪಟ್ಟವರ ಶೇಕಡಾವಾರು ಪ್ರಮಾಣ 0.47 ರಷ್ಟಿದೆ.

ಯಾವ ಜಿಲ್ಲೆ ಎಷ್ಟು?; ಬೆಂಗಳೂರು ನಗರದಲ್ಲಿ ಕಳೆದ 24 ಗಂಟೆಯಲ್ಲಿ 15,244 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 5,98,919ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,37,813.

ಅತಿ ಹೆಚ್ಚು ಪ್ರಕರಣಗಳು; ತುಮಕೂರು 1231, ಬಳ್ಳಾರಿ 940, ಹಾಸನ 689, ಕಲಬುರಗಿ 659, ಕೋಲಾರ 587, ಮೈಸೂರು 818, ರಾಯಚೂರು 433, ವಿಜಯಪುರ 328 ಹೊಸ ಪ್ರಕರಣಗಳು ವರದಿಯಾಗಿವೆ.

ಉತ್ತರ ಕನ್ನಡ 163, ಉಡುಪಿ 274, ಮಂಡ್ಯ 385, ಕೊಪ್ಪಳ 121, ಕೊಡಗು 156, ಗದಗ 73, ಹಾವೇರಿ 46, ಧಾರವಾಡ 361, ದಾವಣಗೆರೆ 157 ಹೊಸ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+