• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹಿಳೆರಿಗೆ ಶೇ 25ರಷ್ಟು ಮೀಸಲಾತಿ

|

ಬೆಂಗಳೂರು, ಫೆಬ್ರವರಿ 15 : ಪೊಲೀಸ್ ಇಲಾಖೆಯ ಏಳು ಶ್ರೇಣಿಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 25ರಷ್ಟು ಮೀಸಲಾತಿ ನೀಡಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಿದ್ದುಪಡಿ ತರಲು ಅನುಮೋದನೆ ನೀಡಲಾಗಿದೆ.

ಕರ್ನಾಟಕ ಪೊಲೀಸ್‌ ಇಲಾಖೆಗೆ ಮುಧೋಳ ನಾಯಿ ಸೇರ್ಪಡೆ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಮೀಸಲಾತಿ ನೀಡುವ ಕುರಿತು 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು.

ಕರ್ನಾಟಕ ಗೃಹ ರಕ್ಷಕ ದಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಿಐಡಿ, ವಯರ್ ಲೆಸ್, ಗುಪ್ತಚರ ಸೇರಿದಂತೆ ಏಳು ಶ್ರೇಣಿಗಳಲ್ಲಿ ಸಬ್ ಇನ್ಸ್‌ಪೆಕ್ಟರ್, ಕಾನ್ಸ್‌ಟೇಬಲ್ ಹುದ್ದೆಗಳಿಗೆ ಶೇ 25ರಷ್ಟು ಮೀಸಲಾತಿ ನೀಡಲಾಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಈ ಪ್ರಮಾಣವನ್ನು ಶೇ 25ಕ್ಕೆ ಏರಿಕೆ ಮಾಡುವ ಸಂಕಲ್ಪವನ್ನು ಸರ್ಕಾರ ಮಾಡಿದೆ.

ಹಿಂದಿನ ಬಜೆಟ್‌ನಲ್ಲಿ ಶೇ 25ರಷ್ಟು ಮೀಸಲಾತಿ ನೀಡುವ ಕುರಿತು ಘೋಷಣೆ ಮಾಡಲಾಗಿತ್ತು. ಎರಡು ಶ್ರೇಣಿಗಳಲ್ಲಿ ಶೇ 20ರಷ್ಟು ಮೀಸಲಾಯಿತಿಯನ್ನು 2014ರಿಂದ ನೀಡಲಾಗಿತ್ತು.

4 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಆಯುಕ್ತರು

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, 'ಪೊಲೀಸ್ ಇಲಾಖೆಯಲ್ಲಿ 16 ಸಾವಿರ ಹುದ್ದೆಗಳು ಖಾಲಿ ಇವೆ. ನೇರ ನೇಮಕದ ವೇಳೆ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ಅದಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ತರಲು ಅನುಮೋದನೆ ಸಿಕ್ಕಿದೆ' ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
In a cabinet meeting Karnataka govt approved to give 25 percent reservation for women in police department. Women will get reservation in 7 range.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more