ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹಿಳೆರಿಗೆ ಶೇ 25ರಷ್ಟು ಮೀಸಲಾತಿ
ಬೆಂಗಳೂರು, ಫೆಬ್ರವರಿ 15 : ಪೊಲೀಸ್ ಇಲಾಖೆಯ ಏಳು ಶ್ರೇಣಿಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ 25ರಷ್ಟು ಮೀಸಲಾತಿ ನೀಡಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತಿದ್ದುಪಡಿ ತರಲು ಅನುಮೋದನೆ ನೀಡಲಾಗಿದೆ.
ಕರ್ನಾಟಕ ಪೊಲೀಸ್ ಇಲಾಖೆಗೆ ಮುಧೋಳ ನಾಯಿ ಸೇರ್ಪಡೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಮೀಸಲಾತಿ ನೀಡುವ ಕುರಿತು 2018-19ನೇ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡಲಾಗಿತ್ತು.
ಕರ್ನಾಟಕ ಗೃಹ ರಕ್ಷಕ ದಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಐಡಿ, ವಯರ್ ಲೆಸ್, ಗುಪ್ತಚರ ಸೇರಿದಂತೆ ಏಳು ಶ್ರೇಣಿಗಳಲ್ಲಿ ಸಬ್ ಇನ್ಸ್ಪೆಕ್ಟರ್, ಕಾನ್ಸ್ಟೇಬಲ್ ಹುದ್ದೆಗಳಿಗೆ ಶೇ 25ರಷ್ಟು ಮೀಸಲಾತಿ ನೀಡಲಾಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಈ ಪ್ರಮಾಣವನ್ನು ಶೇ 25ಕ್ಕೆ ಏರಿಕೆ ಮಾಡುವ ಸಂಕಲ್ಪವನ್ನು ಸರ್ಕಾರ ಮಾಡಿದೆ.
ಹಿಂದಿನ ಬಜೆಟ್ನಲ್ಲಿ ಶೇ 25ರಷ್ಟು ಮೀಸಲಾತಿ ನೀಡುವ ಕುರಿತು ಘೋಷಣೆ ಮಾಡಲಾಗಿತ್ತು. ಎರಡು ಶ್ರೇಣಿಗಳಲ್ಲಿ ಶೇ 20ರಷ್ಟು ಮೀಸಲಾಯಿತಿಯನ್ನು 2014ರಿಂದ ನೀಡಲಾಗಿತ್ತು.
4 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಆಯುಕ್ತರು
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ ಅವರು, 'ಪೊಲೀಸ್ ಇಲಾಖೆಯಲ್ಲಿ 16 ಸಾವಿರ ಹುದ್ದೆಗಳು ಖಾಲಿ ಇವೆ. ನೇರ ನೇಮಕದ ವೇಳೆ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ಅದಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ತರಲು ಅನುಮೋದನೆ ಸಿಕ್ಕಿದೆ' ಎಂದು ಹೇಳಿದರು.