ಕರ್ನಾಟಕದಲ್ಲಿ 2523 ಹೊಸ ಪ್ರಕರಣ; ಬೆಂಗಳೂರಿನಲ್ಲಿ ಗರಿಷ್ಠ ದಾಖಲು

ಬೆಂಗಳೂರು, ಮಾರ್ಚ್ 25: ಕರ್ನಾಟಕದಲ್ಲಿ ಗುರುವಾರ 2,523 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 1,623 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣ ಇದಾಗಿದೆ. ನಂತರ ಉಡುಪಿಯಲ್ಲಿ 145, ಕಲಬುರಗಿ 100 ಹಾಗೂ ಮೈಸೂರಿನಲ್ಲಿ 89 ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸೋಂಕಿನಿಂದ ಒಟ್ಟು ಹತ್ತು ಮಂದಿ ಸಾವನ್ನಪ್ಪಿದ್ದಾರೆ. ಗುರುವಾರ 1192 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,78,478ಕ್ಕೆ ಏರಿದೆ. ರಾಜ್ಯದಲ್ಲಿ ಪ್ರಸ್ತುತ 18,207 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ ಕೊರೊನಾದಿಂದ 12471 ಮಂದಿ ಸಾವನನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಕೆ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೊರೊನಾ ಲಸಿಕೆ ವಿತರಣೆಯನ್ನು ಚುರುಕುಗೊಳಿಸಲಾಗಿದೆ.

2523 New Coronavirus Cases Found In Karnataka On March 25

ಜಿಲ್ಲಾವಾರು ಕೊರೊನಾ ಪ್ರಕರಣಗಳು: ಕಳೆದ 24 ಗಂಟೆಗಳಲ್ಲಿ ಬಾಗಲಕೋಟೆ 7, ಬಳ್ಳಾರಿ 15, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 37, ಬೆಂಗಳೂರು ನಗರ 1623, ಬೀದರ್ 78, ಚಾಮರಾಜನಗರ 4, ಚಿಕ್ಕಬಳ್ಳಾಪುರ 14, ಚಿಕ್ಕಮಗಳೂರು 12, ಚಿತ್ರದುರ್ಗ 5, ದಕ್ಷಿಣ ಕನ್ನಡ 72, ದಾವಣಗೆರೆ 8, ಧಾರವಾಡ 24, ಗದಗ 9, ಹಾಸನ 48, ಹಾವೇರಿ 1, ಕಲಬುರಗಿ 100, ಕೊಡಗು 11, ಕೋಲಾರ 15, ಕೊಪ್ಪಳ 4, ಮಂಡ್ಯ 43, ಮೈಸೂರು 89, ರಾಯಚೂರು 12, ರಾಮನಗರ 10, ಶಿವಮೊಗ್ಗ 22, ತುಮಕೂರು 29, ಉಡುಪಿ 145, ವಿಜಯಪುರ 35, ಯಾದಗಿರಿಯಲ್ಲಿ 9 ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+