Breaking News: ಕರ್ನಾಟಕದಲ್ಲಿ 35,663 ಜನರನ್ನು ಬಲಿ ತೆಗೆದುಕೊಂಡ ಕೊರೊನಾವೈರಸ್!
ಬೆಂಗಳೂರು, ಜುಲೈ 08: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 3,000ಕ್ಕಿಂತ ಕಡಿಮೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.60ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.45ರಷ್ಟಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 62 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 35,663 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 2,530 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,344 ಸೋಂಕಿತರು ಗುಣಮುಖರಾಗಿದ್ದಾರೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,64,868ಕ್ಕೆ ಏರಿಕೆಯಾಗಿದೆ. ಈವರೆಗೂ 27,90,453 ಸೋಂಕಿತರು ಗುಣಮುಖರಾಗಿದ್ದು. 38,729 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ
ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 514 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 12,18,021ಕ್ಕೆ ಏರಿಕೆಯಾಗಿದೆ. 9 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15,711ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 31,896 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,25,656 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,57,552 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 64,90,878 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 2,89,85,436 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,54,76,314 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ
ರಾಜ್ಯದಲ್ಲಿ ಒಟ್ಟು 2530 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 18, ಬೆಳಗಾವಿ 176, ಬೆಂಗಳೂರು ಗ್ರಾಮಾಂತರ 59, ಬೆಂಗಳೂರು 514, ಬೀದರ್ 3, ಚಾಮರಾಜನಗರ 47, ಚಿಕ್ಕಬಳ್ಳಾಪುರ 18, ಚಿಕ್ಕಮಗಳೂರು 114, ಚಿತ್ರದುರ್ಗ 30, ದಕ್ಷಿಣ ಕನ್ನಡ 210, ದಾವಣಗೆರೆ 28, ಧಾರವಾಡ 19, ಗದಗ 5, ಹಾಸನ 202, ಹಾವೇರಿ 9, ಕಲಬುರಗಿ 11, ಕೊಡಗು 81, ಕೋಲಾರ 63, ಕೊಪ್ಪಳ 12, ಮಂಡ್ಯ 88, ಮೈಸೂರು 294, ರಾಯಚೂರು 2, ರಾಮನಗರ 15, ಶಿವಮೊಗ್ಗ 167, ತುಮಕೂರು 135, ಉಡುಪಿ 148, ಉತ್ತರ ಕನ್ನಡ 49, ವಿಜಯಪುರ 4, ಯಾದಗಿರಿ 5 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Recommended Video

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?
ರಾಜ್ಯದಲ್ಲಿ ಈವರೆಗೂ 7,54,609 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,13,183 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 8,60,0081 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,63,579 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,11,65,614 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 34,69,774 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,04,62,938 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 44,37,273 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications