ಕರ್ನಾಟಕದಲ್ಲಿ ಸ್ಥಿರತೆ ಕಾಯ್ದುಕೊಂಡ ಕೊರೊನಾ: ಇಲ್ಲಿದೆ ಅಂಕಿ-ಅಂಶ
ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಕೊರೊನಾವೈರಸ್ ಮಹಾಮಾರಿ ಸ್ಥಿರತೆ ಕಾಯ್ದುಕೊಂಡಂತೆ ಕಾಣುತ್ತಿದೆ. ಏಪ್ರಿಲ್ ತಿಂಗಳಾಂತ್ಯ ಹಾಗೂ ಮೇ ತಿಂಗಳ ಆರಂಭದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಪ್ರತಿನಿತ್ಯ 40 ರಿಂದ 50 ಸಾವಿರದ ಗಡಿ ದಾಟಿತ್ತು. ಇಂದಿಗೆ ಪರಿಸ್ಥಿತಿ ಬದಲಾಗಿದೆ.
ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ಒಂದು ದಿನದಲ್ಲಿ 25,311 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 57,333 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 529 ಜನರು ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 24,50,215 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 19,83,948 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ 25811 ಜನರು ಬಲಿಯಾಗಿದ್ದಾರೆ. ಉಳಿದಂತೆ 4,40,435 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಕೊರೊನಾವೈರಸ್ ಪ್ರಕರಣ?
ರಾಜ್ಯದಲ್ಲಿ ಒಟ್ಟು 25,311 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 283, ಬಳ್ಳಾರಿ 807, ಬೆಳಗಾವಿ 747, ಬೆಂಗಳೂರು ಗ್ರಾಮಾಂತರ 385, ಬೆಂಗಳೂರು 5701, ಬೀದರ್ 58, ಚಾಮರಾಜನಗರ 439, ಚಿಕ್ಕಬಳ್ಳಾಪುರ 605, ಚಿಕ್ಕಮಗಳೂರು 633, ಚಿತ್ರದುರ್ಗ 541, ದಕ್ಷಿಣ ಕನ್ನಡ 721, ದಾವಣಗೆರೆ 633, ಧಾರವಾಡ 1058, ಗದಗ 277, ಹಾಸನ 1156, ಹಾವೇರಿ 312, ಕಲಬುರಗಿ 245, ಕೊಡಗು 251, ಕೋಲಾರ 580, ಕೊಪ್ಪಳ 337, ಮಂಡ್ಯ 888, ಮೈಸೂರು 2680, ರಾಯಚೂರು 753, ರಾಮನಗರ 285, ಶಿವಮೊಗ್ಗ 730, ತುಮಕೂರು 1662, ಉಡುಪಿ 927, ಉತ್ತರ ಕನ್ನಡ 1110, ವಿಜಯಪುರ 256, ಯಾದಗಿರಿ 251 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.












Click it and Unblock the Notifications