ಕರ್ನಾಟಕದಲ್ಲಿ ಮೊದಲ ಬಾರಿಗೆ ಕೊರೊನಾದಿಂದ ಅತಿಹೆಚ್ಚು ಜನರು ಸಾವು!

ಬೆಂಗಳೂರು, ಮೇ 23: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಮೊದಲಿಗಿಂತಲೂ ಹೆಚ್ಚು ಅಪಾಯಕಾರಿ ಎಂಬ ಭೀತಿ ಹೆಚ್ಚುತ್ತಿದೆ. 2ನೇ ಅಲೆ ಆರಂಭವಾದ ನಂತರ ಮೊದಲ ಬಾರಿಗೆ ಕೊವಿಡ್-19 ಸೋಂಕಿನಿಂದ ಒಂದೇ ದಿನ ಅತಿಹೆಚ್ಚು ಸೋಂಕಿತರು ಪ್ರಾಣ ಬಿಟ್ಟಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 626 ಮಂದಿ ಜೀವ ಕಳೆದುಕೊಂಡಿದ್ದು, ಇದುವರೆಗೂ 25,282 ಸೋಂಕಿತರು ಉಸಿರು ನಿಲ್ಲಿಸಿದ್ದಾರೆ. ಕಳೆದ 24 ಗಂಟೆಗಳಲ್ಲೇ 25979 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 35,573 ಸೋಂಕಿತರು ಗುಣಮುಖರಾಗಿದ್ದಾರೆ.

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 2424904 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಈವರೆಗೂ 19,26,615 ಸೋಂಕಿತರು ಗುಣಮುಖರಾಗಿದ್ದು, 4,72,986 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

25979 New Coronavirus Cases Reported in Karnataka Today, State Tally Rise to 2424904

ಕೊವಿಡ್-19 ಪರೀಕ್ಷೆ ಸಂಖ್ಯೆಯಲ್ಲಿ ಇಳಿಮುಖ

ಕೊವಿಡ್-19 ಪರೀಕ್ಷೆ ಸಂಖ್ಯೆಯಲ್ಲಿ ಇಳಿಮುಖ

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಹೊಸ ಪ್ರಕರಣಕ್ಕಿಂತ ಗುಣಮುಖರ ಸಂಖ್ಯೆ ಹೆಚ್ಚುತ್ತಿದೆ ಎಂದು ನಿರಾತಂಕದಿಂದ ಇರುವಂತಿಲ್ಲ. ರಾಜ್ಯದಲ್ಲಿ ಕೊವಿಡ್-19 ಪರೀಕ್ಷೆ ಸಂಖ್ಯೆ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 17,848 ಜನರಿಗೆ ರಾಪಿಡ್ ಆಂಟಿಜೆನಿಕ್ ಪರೀಕ್ಷೆ ನಡೆಸಲಾಗಿದೆ. 1,07,269 ಜನರಿಗೆ RT-PCR ತಪಾಸಣೆ ನಡೆಸಲಾಗಿದ್ದು, ಒಂದು ದಿನದಲ್ಲಿ ಒಟ್ಟು 1,25,117 ಮಂದಿಗೆ ಮಾತ್ರ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ.

ರಾಜ್ಯ ರಾಜಧಾನಿಯಲ್ಲಿ ತಗ್ಗಿದ ಕೊವಿಡ್-19 ಅಪಾಯ

ರಾಜ್ಯ ರಾಜಧಾನಿಯಲ್ಲಿ ತಗ್ಗಿದ ಕೊವಿಡ್-19 ಅಪಾಯ

ಕೊರೊನಾವೈರಸ್ ಸೋಂಕಿನಿಂದ ತತ್ತರಿಸಿದ ಬೆಂಗಳೂರಿನಲ್ಲಿ ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ. ಸಿಲಿಕಾನ್ ಸಿಟಿಯಲ್ಲಿ ಒಂದು ದಿನದಲ್ಲಿ 7494 ಮಂದಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 11,19,552ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 362 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 11,216ಕ್ಕೆ ಏರಿಕೆಯಾಗಿದೆ. 2,55,842 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

ರಾಜ್ಯದ ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್?

ರಾಜ್ಯದಲ್ಲಿ ಒಟ್ಟು 25,282 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 218, ಬಳ್ಳಾರಿ 1190, ಬೆಳಗಾವಿ 1066, ಬೆಂಗಳೂರು ಗ್ರಾಮಾಂತರ 400, ಬೆಂಗಳೂರು 7494, ಬೀದರ್ 49, ಚಾಮರಾಜನಗರ 407, ಚಿಕ್ಕಬಳ್ಳಾಪುರ 613, ಚಿಕ್ಕಮಗಳೂರು 577, ಚಿತ್ರದುರ್ಗ 365, ದಕ್ಷಿಣ ಕನ್ನಡ 899, ದಾವಣಗೆರೆ 363, ಧಾರವಾಡ 858, ಗದಗ 371, ಹಾಸನ 1618, ಹಾವೇರಿ 243, ಕಲಬುರಗಿ 234, ಕೊಡಗು 329, ಕೋಲಾರ 439, ಕೊಪ್ಪಳ 356, ಮಂಡ್ಯ 643, ಮೈಸೂರು 2222, ರಾಯಚೂರು 540, ರಾಮನಗರ 279, ಶಿವಮೊಗ್ಗ 643, ತುಮಕೂರು 1269, ಉಡುಪಿ 909, ಉತ್ತರ ಕನ್ನಡ 862, ವಿಜಯಪುರ 246, ಯಾದಗಿರಿ 277 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

    Surajpur ಜಿಲ್ಲೆಯ Collector ಮಾಡಿದ ಕೆಲಸ ನೋಡಿ | Oneindia Kannada
    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ಕರ್ನಾಟಕದಲ್ಲಿ ಕೊವಿಡ್-19 ಲಸಿಕೆ ವಿತರಣೆ

    ಕರ್ನಾಟಕದಲ್ಲಿ ಈವರೆಗೂ 7,06,807 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 4,66,045 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 5,43,229 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 2,01,750 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. 45 ವರ್ಷಕ್ಕಿಂತ ಮೇಲ್ಪಟ್ಟ 79,95,056 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 19,51,055 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 94,30,633 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 26,18,850 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+