ಬೆಳಗಾವಿಯಲ್ಲಿ 2.73 ಕೋಟಿ ಹಣ ಜಪ್ತಿ; ಇಷ್ಟೊಂದು ಹಣ ಯಾರದ್ದು.?

ಬೆಳಗಾವಿ, ಅಕ್ಟೋಬರ್‌ 19: ಬೆಳಗಾವಿಯಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಕೋಟ್ಯಂತರ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿಗಟ್ಟಲೇ ನಗದು ಪತ್ತೆಯಾಗಿದೆ.

ಮಹಾರಾಷ್ಟ್ರದ ಸಾಂಗಲಿ‌ಯಿಂದ ಹುಬ್ಬಳ್ಳಿ ಕಡೆಗೆ ವಾಹನ ಬರುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ವಾಹನ ಚಾಲಕನನ್ನು ಬಂಧಿಸಿ, ಹಣವನ್ನು ಜಪ್ತಿ ಮಾಡಿದ್ದಾರೆ. ಮಹಾರಾಷ್ಟ್ರದ ಸಾಂಗಲಿ ಪಟ್ಟಣದ ಸಚಿನ್ ಮೇನಕುದುಳೆ, ಮಾರುತಿ ಮಾರಗುಡೆ ಬಂಧನಕ್ಕೆ ಒಳಗಾಗಿದ್ದಾರೆ. ಇನ್ನೂ ಜಪ್ತಿಯಾದ ಹಣ ಮೂಲದ ಬಗ್ಗೆ ತನಿಖೆ ನಡೆಸುತ್ತಿರೋದಾಗಿ ಬೆಳಗಾವಿ ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.

273 crore money was confiscated in belagavi without documents

ಈ ಬಗ್ಗೆ ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಮಹಾರಾಷ್ಟ್ರದಲ್ಲಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣಾಧಿಕಾರಿಗಳು ಹದ್ದಿನ ಕಣ್ಣುಗಳನ್ನು ಇಟ್ಟಿದ್ದಾರೆ. ಹೀಗಾಗಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಬೆಳಗಾವಿಯಲ್ಲಿ 2.73 ಕೋಟಿ ಸೀಜ್ ಆಗಿದ್ದು,ಹಲವು ಅನುಮಾನಗಳಿಗೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+