ಕರ್ನಾಟಕದಲ್ಲಿ 2,792 ಹೊಸ ಕೋವಿಡ್ ಪ್ರಕರಣಗಳು ದಾಖಲು
ಬೆಂಗಳೂರು, ಮಾರ್ಚ್ 29: ಕರ್ನಾಟಕದಲ್ಲಿ 2,792 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 9,89,804ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 23,849.
ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಇಂದು ಆಸ್ಪತ್ರೆಯಿಂದ 1,964 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇಂದು ಮೃತಪಟ್ಟವರ ಸಂಖ್ಯೆ 16. ಒಟ್ಟು ಮೃತಪಟ್ಟವರು 12,520.

ಯಾವ ಜಿಲ್ಲೆಯಲ್ಲಿ ಎಷ್ಟು?; ಬೆಂಗಳೂರು ನಗರದಲ್ಲಿ ಇಂದು 1742 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 4,29,915ಕ್ಕೆ ಏರಿಕೆಯಾಗಿದೆ. ನಗರದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 16,259.
ಬೀದರ್ 247, ಕಲಬುರಗಿ 118, ಮೈಸೂರು 110, ತುಮಕೂರು 60, ಉಡುಪಿ 71, ಮಂಡ್ಯ 41, ಕೋಲಾರ 33, ಹಾಸನ 32, ದಕ್ಷಿಣ ಕನ್ನಡದಲ್ಲಿ 45 ಹೊಸ ಪ್ರಕರಣಗಳು ದಾಖಲಾಗಿವೆ.
ಕಡಿಮೆ ಪ್ರಕರಣಗಳು; ರಾಜ್ಯದಲ್ಲಿ ಚಾಮರಾಜನಗರ 4, ಚಿಕ್ಕಬಳ್ಳಾಪುರ 6, ಚಿತ್ರದುರ್ಗ 5, ದಾವಣಗೆರೆ 2, ಕೊಡಗು 2, ರಾಮನಗರ 6, ಶಿವಮೊಗ್ಗ 5, ಯಾದಗಿರಿಯಲ್ಲಿ 9 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಇಂದು 4055 ಆಂಟಿಜೆನ್, 83,142 ಆರ್‌ಟಿಪಿಸಿಆರ್ ಪರೀಕ್ಷೆ ನಡೆಸಿದ್ದು, ಒಟ್ಟು 87,197 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಇದುವರೆಗೂ ರಾಜ್ಯದಲ್ಲಿ 21195741 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಹೆಲ್ತ್ ಬುಲೆಟಿನ್ ಹೇಳಿದೆ.












Click it and Unblock the Notifications