ಕರ್ನಾಟಕದಲ್ಲಿ ಒಂದೇ ದಿನ 2848 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಜುಲೈ 05: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.94ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.35ರಷ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 67 ಮಂದಿ ಕೊವಿಡ್-19 ಸೋಂಕಿನಿಂದಲೇ ಉಸಿರು ಚೆಲ್ಲಿದ್ದು, ಈವರೆಗೂ 35434 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 2848 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 5631 ಸೋಂಕಿತರು ಗುಣಮುಖರಾಗಿದ್ದಾರೆ.

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ. ಈವರೆಗೂ 27,79,038 ಸೋಂಕಿತರು ಗುಣಮುಖರಾಗಿದ್ದು. 41,996 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

 2848 New Coronavirus Cases Reported in Karnataka Today, State Tally Rise to 2856491

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 2848 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 2, ಬಳ್ಳಾರಿ 15, ಬೆಳಗಾವಿ 95, ಬೆಂಗಳೂರು ಗ್ರಾಮಾಂತರ 57, ಬೆಂಗಳೂರು 520, ಬೀದರ್ 6, ಚಾಮರಾಜನಗರ 49, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 196, ಚಿತ್ರದುರ್ಗ 60, ದಕ್ಷಿಣ ಕನ್ನಡ 265, ದಾವಣಗೆರೆ 30, ಧಾರವಾಡ 12, ಗದಗ 7, ಹಾಸನ 383, ಹಾವೇರಿ 12, ಕಲಬುರಗಿ 26, ಕೊಡಗು 120, ಕೋಲಾರ 64, ಕೊಪ್ಪಳ 5, ಮಂಡ್ಯ 84, ಮೈಸೂರು 371, ರಾಯಚೂರು 9, ರಾಮನಗರ 10, ಶಿವಮೊಗ್ಗ 140, ತುಮಕೂರು 126, ಉಡುಪಿ 108, ಉತ್ತರ ಕನ್ನಡ 56, ವಿಜಯಪುರ 7, ಯಾದಗಿರಿ 2 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

      Unlock 3.0 ? CM ಕೊಟ್ಟಿರೋ ಹೊಸ ನಿಯಮಾವಳಿಗಳು | Relaxation From Lockdown | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+