ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಬೃಹತ್ ಲಸಿಕಾ ಮೇಳ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

|
Google Oneindia Kannada News

ಬೆಂಗಳೂರು, ಸೆ. 18: ಶುಕ್ರವಾರ ರಾಜ್ಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಲಸಿಕಾ ಮೇಳ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ 30 ಲಕ್ಷ ಲಸಿಕೆ ಹಾಕುವ ಗುರಿ ಇಟ್ಟು ಕೊಳ್ಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ಲಸಿಕಾ ಅಭಿಯಾನದ ಬಗ್ಗೆ ಮಾಹಿತಿ ನೀಡಲಾಗಿತ್ತು. ೩೦ ಲಕ್ಷ ಡೋಸ್ ಪೈಕಿ 29 ಲಕ್ಷ ಡೋಸ್ ಲಸಿಕೆ ಹಾಕಲಾಗಿದೆ. ಇದು ಸಾಧ್ಯವಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ನಿರಂತರ ಸಹಕಾರದಿಂದ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಈ ಮಹತ್ವದ ಸಾಧನೆಯನ್ನು ಸಾಧಿಸಿದ ಆರೋಗ್ಯ ಸೇವಾ ಕಾರ್ಯಕರ್ತರ ಅಭಿನಂದಿಸಿರುವ ಮುಖ್ಯಮಂತ್ರಿಗಳು ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ಅವರಿಗೂ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ರಾಝ್ಯದಲ್ಲಿ ನಡೆದ ಬೃಹತ್ ಕೋವಿಡ್ ಲಸಿಕೆ ಅಭಿಯಾನದ ಸಂಪೂರ್ಣ ವಿವರ ಮುಂದಿದೆ.

ಒಂದೇ ದಿನ 30 ಲಕ್ಷ ಜನರಿಗೆ ಕೋವಿಡ್ ಲಸಿಕೆ!

ಒಂದೇ ದಿನ 30 ಲಕ್ಷ ಜನರಿಗೆ ಕೋವಿಡ್ ಲಸಿಕೆ!

ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 29 ಲಕ್ಷ ಲಸಿಕೆ ನೀಡಲಾಗಿದೆ. ಇನ್ನೂ 1.68 ಲಕ್ಷ ದಾಖಲು ಮಾಡಬೇಕಿದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಹೊಸ ಸಾಧನೆ ಮಾಡಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ಕೊಟ್ಟಿದೆ.

ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಲಸಿಕೆ ನೀಡುವ ಮೂಲಕ ಆಚರಿಸಲು ತೀರ್ಮಾನಿಸಲಾಗಿತ್ತು. ಅದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರೋತ್ಸಾಹ ನೀಡಿದರು. ಒಂದೇ ದಿನದಲ್ಲಿ 30 ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಂಡಿದ್ದು, ಶನಿವಾರ ಬೆಳಗ್ಗೆ 8.30 ವೇಳೆಗೆ 29,50,093 ಲಸಿಕೆ ನೀಡಿರುವುದು ದಾಖಲಾಗಿದೆ. ಇನ್ನೂ 1.68 ಲಕ್ಷ ಡೋಸ್ ಲಸಿಕೆ ನೀಡಿರುವುದನ್ನು ದಾಖಲು ಮಾಡಬೇಕಿದೆ. ಇದರಿಂದಾಗಿ 31 ಲಕ್ಷ ಲಸಿಕೆ ನೀಡಿದಂತಾಗುತ್ತದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಮಾಹಿತಿ ನೀಡಿದ್ದಾರೆ.

ಮೊದಲ ಸ್ಥಾನದಲ್ಲಿದೆ ಕರ್ನಾಟಕ!

ಮೊದಲ ಸ್ಥಾನದಲ್ಲಿದೆ ಕರ್ನಾಟಕ!

ಪ್ರತಿ ಅರ್ಹ ಹತ್ತು ಲಕ್ಷ ಜನಸಂಖ್ಯೆಗೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕವು 62,003 ಲಸಿಕೆ ನೀಡುವ ಮೂಲಕ ಮೊದಲ ಸ್ಥಾನದಲ್ಲಿದೆ. 14,401 ಲಸಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದ್ದು, ಒಂದು ಕಡೆ ಸರಾಸರಿ 205 ಲಸಿಕೆ ನೀಡಲಾಗಿದೆ. 14 ಜಿಲ್ಲೆಗಳು ಗುರಿಗಿಂತ ಅಧಿಕ ಸಾಧನೆ ಮಾಡಿವೆ. 4 ಜಿಲ್ಲೆಗಳು ಮಾತ್ರ ಗುರಿಗಿಂತ ಶೇಕಡಾ 75ರಷ್ಟು ಮಾತ್ರ ಸಾಧನೆ ಮಾಡಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ಹಂಚಿಕೊಂಡಿದೆ.

ಬೆಂಗಳೂರಿನಲ್ಲಿ ಅತಿ ಹೆಚ್ಚು ಲಸಿಕೆ!

ಬೆಂಗಳೂರಿನಲ್ಲಿ ಅತಿ ಹೆಚ್ಚು ಲಸಿಕೆ!

ಇಡೀ ದೇಶದಲ್ಲಿ ಅತಿ ಹೆಚ್ಚು ಲಸಿಕೆಯನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ (4.09 ಲಕ್ಷ) ನೀಡಲಾಗಿದೆ. ಬೆಳಗಾವಿಯಲ್ಲಿ 2.57 ಲಕ್ಷ ಲಸಿಕೆ ನೀಡಲಾಗಿದೆ. ಜಿಲ್ಲಾಮಟ್ಟದ ಸಾಧನೆಯಲ್ಲಿ ಎರಡು ಸ್ಥಾನಗಳು ರಾಜ್ಯಕ್ಕೆ ಬಂದಿವೆ. ರಾಜ್ಯದಲ್ಲಿ ಒಟ್ಟು 14.96 ಲಕ್ಷ ಲಸಿಕೆಗಳನ್ನು ಮಹಿಳೆಯರು ಪಡೆದಿದ್ದು, ಪುರುಷರಿಗಿಂತ (14.53 ಲಕ್ಷ) ಮುಂದೆ ಇದ್ದಾರೆ. ಇವೆಲ್ಲ ಸೇರಿ ಈವರೆಗೆ ಒಟ್ಟು 5 ಕೋಟಿ ಲಸಿಕೆ ನೀಡಿದ್ದು, ಕಳೆದ 20 ದಿನಗಳಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ.

1 ಕೋಟಿ ಜನರಿಗೆ ಎರಡೂ ಡೋಸ್ ನೀಡಲಾಗಿದೆ ಎಂಬ ಹೆಗ್ಗಳಿಕೆ ಬಂದಿದೆ. ಕಲಬುರ್ಗಿಯಲ್ಲಿ ಗುರಿಗಿಂತ ಕೇವಲ ಶೇಕಡಾ 41, ಕೊಪ್ಪಳದಲ್ಲಿ ಶೇ. 62, ಉಡುಪಿಯಲ್ಲಿ ಶೇ. 63 ಆಗಿದೆ. ಬೆಂಗಳೂರು ನಗರದಲ್ಲಿ ಶೇಕಡಾ 143, ಶಿವಮೊಗ್ಗದಲ್ಲಿ ಶೇಕಡಾ 134, ಧಾರವಾಡ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ಶೇಕಡಾ 120 ಸಾಧನೆ ಮಾಡಲಾಗಿದೆ ಎಂದು ಇಲಾಖೆ ಮಾಹಿತಿ ಕೊಟ್ಟಿದೆ.

ರಕ್ತ ಸಂಗ್ರಹ, ಅಂಗಾಂಗ ದಾನ

ರಕ್ತ ಸಂಗ್ರಹ, ಅಂಗಾಂಗ ದಾನ

ಇದೇ ದಿನ ರಾಜ್ಯದಲ್ಲಿ ರಕ್ತದಾನ ಶಿಬಿರ ನಡೆದಿದ್ದು, ಒಟ್ಟು 5,201 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಬಿಎಂಪಿಯಲ್ಲಿ 1,240 ಯುನಿಟ್, ಬಳ್ಳಾರಿಯಲ್ಲಿ 298, ದಕ್ಷಿಣ ಕನ್ನಡದಲ್ಲಿ 295 ಯುನಿಟ್ ಸಂಗ್ರಹವಾಗಿದೆ. ಎರಡು ವಾರಗಳಲ್ಲಿ ಒಂದು ಲಕ್ಷ ಯುನಿಟ್ ರಕ್ತ ಸಂಗ್ರಹಿಸಬೇಕೆಂಬ ಗುರಿ ಇದ್ದು, ಇದಕ್ಕಾಗಿ ಸೂಚನೆ ನೀಡಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.1 ಜನರಿಗೆ ರಕ್ತ ಬೇಕಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಅಂಗಾಂಗ ಕಸಿಗೂ ದಾನ ಹೆಚ್ಚಬೇಕಿದೆ. ಇದಕ್ಕಾಗಿ ಮೆಡಿಕಲ್ ಕಾಲೇಜು, ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ದಾನ ವಿಭಾಗ ಆರಂಭಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿಗಳಿಂದ ದೊಡ್ಡ ಅಭಿಯಾನಕ್ಕೆ ಚಾಲನೆ ನೀಡಿ ಜಾಗೃತಿ ಮೂಡಿಸಿ ಇಡೀ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಜೊತೆಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಪ್ರತಿ ಕುಟುಂಬಕ್ಕೆ ನೀಡಲು ಮೂರು ತಿಂಗಳ ಗುರಿ ನೀಡಲಾಗುವುದು. ಎರಡೂವರೆ ಕೋಟಿ ಕುಟುಂಬಕ್ಕೆ ನೀಡುವ ಗುರಿ ಇದೆ ಎಂದರು.

Recommended Video

ವಿರಾಟ್ ನಂತರ ಈ ಮೂವರಲ್ಲಿ ಯಾರಾಗ್ತಾರೆ RCB ನಾಯಕ? | Oneindia kannada

English summary
29 lakh jabs were administered in Karnataka on Friday and about 1.68 lakh doses are yet to be recorded on Cowin portal. Karnataka accounted for 11% of the total doses administered in the country and achieved a unique feat. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X