ಕರ್ನಾಟಕ: ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಸುಳಿವು ನೀಡಿದ ಸರ್ಕಾರ

ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಾವಾಗ ನಡೆಯಲಿದೆ ಎನ್ನುವ ಕುರಿತು ಸರ್ಕಾರ ಸುಳಿವು ನೀಡಿದೆ.

ರಾಜ್ಯ ಸರ್ಕಾರದ ನಿಲುವಿನ ಬಗ್ಗೆ ಕೇಂದ್ರ ಸರ್ಕಾರಕ್ಕೆ ನೀಡಿದ ಸಲಹೆಯನ್ನು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಮಾಹಿತಿ ನೀಡಿದ್ದಾರೆ.

ಮೇ.23ರಂದು ಹಲವು ರಾಜ್ಯಗಳ ಶಿಕ್ಷಣ ಸಚಿವರು ದ್ವಿತೀಯ ಪಿಯುಸಿ ಪರೀಕ್ಷೆ ಕುರಿತು ಸಭೆ ನಡೆಸಿದ್ದು, ಪ್ರಮುಖ ವಿಷಯಗಳಿಗೆ ಮಾತ್ರ ಪರೀಕ್ಷೆ ನಡೆಸುವಂತೆ ಸಿಬಿಎಸ್‌ಇ ಸಲಹೆ ನೀಡಿದೆ.

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದರೂ ಕೂಡ, ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

 ಜುಲೈ ತಿಂಗಳಲ್ಲಿ ಪರೀಕ್ಷೆ

ಜುಲೈ ತಿಂಗಳಲ್ಲಿ ಪರೀಕ್ಷೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜುಲೈ ತಿಂಗಳಿನಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ಪಿಯು ಬೋರ್ಡ್ ನಿರ್ದೇಶಕಿ ಆರ್ ಸ್ನೇಹಲ್ ಅವರು ತಿಳಿಸಿದ್ದಾರೆ.

 ವೃತ್ತಿಪರ ಕೋರ್ಸ್‌ಗಳು

ವೃತ್ತಿಪರ ಕೋರ್ಸ್‌ಗಳು

ಈಗ ಪಠ್ಯ ಕಡಿತ ಪ್ರಶ್ನೆ ಪತ್ರಿಕೆ ಬದಲಾವಣೆ ಮಾಡುವುದು ಕಷ್ಟವಾಗುತ್ತದೆ ಎಂದಿರುವ ಅವರು, ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯ ನಂತರವೇ ವೃತ್ತಿಪರ ಕೋರ್ಸ್‌ಳಿಗೆ ಪ್ರವೇಶ ಪರೀಕ್ಷೆಗಳನ್ನು ನಡೆಸುವಂತೆ ಮನವಿ ಮಾಡಿದ್ದಾರೆ.

ಪ್ರಶ್ನೆ ಪತ್ರಿಕೆ ಪ್ರಕ್ರಿಯೆ ಸಿದ್ಧತೆ ಪೂರ್ಣ

ಪ್ರಶ್ನೆ ಪತ್ರಿಕೆ ಪ್ರಕ್ರಿಯೆ ಸಿದ್ಧತೆ ಪೂರ್ಣ

ಈಗ ಮತ್ತೊಮ್ಮೆ ಪಠ್ಯ ಕಡಿತ, ಪ್ರಶ್ನೆಪತ್ರಿಕೆ ಬದಲಾವಣೆ ಮಾಡುವುದು ಕಷ್ಟಕರವಾಗುತ್ತದೆ. ಕೇಂದ್ರದ ಸಲಹೆ, ಸಭೆ ನಂತರ ಪರೀಕ್ಷಾ ಪದ್ಧತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಆದರೆ, ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳಲು 75 ದಿನಗಳ ಅಗತ್ಯವಿದೆ. ಪರೀಕ್ಷೆ ಪಠ್ಯ, ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವ ಪ್ರಕ್ರಿಯೆ ಈಗಾಗಲೇ ರಾಜ್ಯದಲ್ಲಿ ಪೂರ್ಣಗೊಂಡಿದೆ.
 ಪಠ್ಯ ಕಡಿತ

ಪಠ್ಯ ಕಡಿತ

ಕೇಂದ್ರದ ಸಲಹೆ ಹಾಗೂ ಸಭೆ ಬಳಿಕ ಪರೀಕ್ಷಾ ಪದ್ದತಿ ಹಾಗೂ ಪಠ್ಯ ಕಡಿತದ ಬಗ್ಗೆ ಚಿಂತನೆ ಮಾಡಲಾಗಿದೆ. ಈಗಾಗಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ. ಜತೆಗೆ ಪಠ್ಯವನ್ನೂ ಸಹ ರೂಪಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+