2ನೇ ಹಂತದ ಚುನಾವಣೆ : 288 ಅಭ್ಯರ್ಥಿಗಳು ಕಣದಲ್ಲಿ
ಬೆಂಗಳೂರು, ಏಪ್ರಿಲ್ 7 : ಕರ್ನಾಟಕದ 2ನೇ ಹಂತದ ಲೋಕಸಭಾ ಕಣದಲ್ಲಿ 288 ಅಭ್ಯರ್ಥಿಗಳು ಇದ್ದಾರೆ. ಏಪ್ರಿಲ್ 23ರಂದು 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
2ನೇ ಹಂತದ ಚುನಾವಣೆ ನಡೆಯುವ 14 ಕ್ಷೇತ್ರಗಳಲ್ಲಿ ಶುಕ್ರವಾರ ನಾಮಪತ್ರಗಳ ಪರಿಶೀಲನೆ ಕಾರ್ಯ ಮುಕ್ತಾಯಗೊಂಡಿದೆ. 30 ನಾಮಪತ್ರಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.
318 ಅಭ್ಯರ್ಥಿಗಳು 457 ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ಇವುಗಳಲ್ಲಿ 30 ನಾಮಪತ್ರ ತಿರಸ್ಕಾರವಾಗಿದ್ದು. 288 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಏಪ್ರಿಲ್ 8ರ ಸೋಮವಾರ ಕೊನೆಯ ದಿನವಾಗಿದೆ.

ಚುನಾವಣೆ ನಡೆಯುವ ಕ್ಷೇತ್ರಗಳು : ಏಪ್ರಿಲ್ 23ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ರಾಯಚೂರು, ಗುಲ್ಬರ್ಗ, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಕ್ಷೇತ್ರದಲ್ಲಿ ಚುನಾವಣೆ ನಡೆಯಲಿದೆ.
ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು : ಗುಲ್ಬರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ, ಉತ್ತರ ಕನ್ನಡದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ, ವಿಜಯಪುರ ಕ್ಷೇತ್ರದಲ್ಲಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.












Click it and Unblock the Notifications