2ನೇ ಹಂತದ ಲೋಕಸಭಾ ಚುನಾವಣೆ : ಅಂಕಿ-ಸಂಖ್ಯೆಗಳ ಲೆಕ್ಕ

ಬೆಂಗಳೂರು, ಏಪ್ರಿಲ್ 22 : ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದ ರಾಜಕೀಯ ನಾಯಕರ ಅಬ್ಬರದ ಪ್ರಚಾರ, ಆರೋಪ, ಟೀಕಾ ಪ್ರಹಾರಗಳಿಗೆ ತೆರೆ ಬಿದ್ದಿದೆ.

ರಾಜ್ಯದ 28 ಕ್ಷೇತ್ರಗಳ ಪೈಕಿ ಏಪ್ರಿಲ್ 14ರಂದು 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಏಪ್ರಿಲ್ 22ರ ಮಂಗಳವಾರ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಹುತೇಕ ಉತ್ತರ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳು ಎರಡನೇ ಹಂತದಲ್ಲಿವೆ.

ಮಂಗಳವಾರ 14 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 2.43 ಕೋಟಿ ಮತದಾರರು ಹಕ್ಕು ಚಲಾಯಿಸುವ ಅವಕಾಶವನ್ನು ಪಡೆದಿದ್ದಾರೆ.

ಮತದಾನ ನಡೆಯುವ ಕೇಂದ್ರದ ವ್ಯಾಪ್ತಿಯ 100 ಮೀಟರ್ ಪ್ರದೇಶವನ್ನು ನಿಷೇಧಿತ ವಲಯ ಎಂದು ಘೋಷಣೆ ಮಾಡಲಾಗಿದೆ. ಮತಗಟ್ಟೆಗಳ ಭದ್ರತೆಗೆ 34,548 ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಎಲ್ಲೆಲ್ಲಿ ಮತದಾನ?

ಎಲ್ಲೆಲ್ಲಿ ಮತದಾನ?

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ರಾಯಚೂರು, ಗುಲ್ಬರ್ಗ, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ.

ಒಟ್ಟು ಮತದಾರರು

ಒಟ್ಟು ಮತದಾರರು

14 ಲೋಕಸಭಾ ಕ್ಷೇತ್ರಗಳಲ್ಲಿ 2.43 ಕೋಟಿ ಮತದಾರರು ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ. ಇವರಲ್ಲಿ 1.22 ಕೋಟಿ ಪುರುಷರು. 1.20 ಕೋಟಿ ಮಹಿಳೆಯರು. 2022 ತೃತೀಯ ಲಿಂಗಿಗಳು.

ಎಷ್ಟು ಮತಗಟ್ಟೆಗಳು?

ಎಷ್ಟು ಮತಗಟ್ಟೆಗಳು?

2ನೇ ಹಂತದಲ್ಲಿ 237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1,43,580 ಸಿಬ್ಬಂದಿ ಚುನಾವಣಾ ಕಾರ್ಯದಲ್ಲಿ ತೊಡಗಲಿದ್ದಾರೆ. 28,022 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 5,605 ಮತಗಟ್ಟೆಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. 1026 ಮತಗಟ್ಟೆಗಳಲ್ಲಿ ಕೇಂದ್ರ ಸಶಸ್ತ್ರ ಮೀಸಲು ಪಡೆಯ 57 ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ.

ರಾಯಚೂರಲ್ಲಿ ಹೆಚ್ಚು ಮತಗಟ್ಟೆ

ರಾಯಚೂರಲ್ಲಿ ಹೆಚ್ಚು ಮತಗಟ್ಟೆ

ರಾಯಚೂರು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚು ಅಂದರೆ 2184 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ ಎಂದರೆ 1872 ಮತಗಟ್ಟೆಗಳಿವೆ. 216 ಸಖಿ ಮತಗಟ್ಟೆ, 7 ಪಾರಂಪರಿಕ ಮತಗಟ್ಟೆಗಳಿವೆ.

ಕಣದಲ್ಲಿರುವ ಪ್ರಮುಖರು

ಕಣದಲ್ಲಿರುವ ಪ್ರಮುಖರು

ಮಲ್ಲಿಕಾರ್ಜುನ ಖರ್ಗೆ (ಗುಲ್ಬರ್ಗ), ಅನಂತ್ ಕುಮಾರ್ ಹೆಗಡೆ (ಉತ್ತರ ಕನ್ನಡ), ರಮೇಶ್ ಜಿಗಜಿಣಗಿ (ವಿಜಯಪುರ), ಡಾ.ಉಮೇಶ್ ಜಾಧವ್ (ಗುಲ್ಬರ್ಗ), ಬಿ.ವೈ.ರಾಘವೇಂದ್ರ (ಶಿವಮೊಗ್ಗ), ಮಧು ಬಂಗಾರಪ್ಪ (ಶಿವಮೊಗ್ಗ), ಈಶ್ವರ ಖಂಡ್ರೆ (ಬೀದರ್), ವಿ.ಎಸ್.ಉಗ್ರಪ್ಪ (ಬಳ್ಳಾರಿ).

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+