63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ

ಬೆಂಗಳೂರು, ಮೇ 02 : ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತೊಂದು ಚುನಾವಣೆ ಎದುರಾಗಿದೆ. ರಾಜ್ಯದ 63 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ 29ರಂದು ಮತದಾನ ನಡೆಯಲಿದೆ.

ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ಅವರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದರು. ಚುನಾವಣೆ ನಡೆಯುವ ಪ್ರದೇಶಗಳಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ.

63 ಸ್ಥಳೀಯ ಸಂಸ್ಥೆಗಳ 1,361 ವಾರ್ಡ್‌ಗಳಿಗೆ ಮೇ 29ರಂದು ಚುನಾವಣೆ ನಡೆಯಲಿದೆ. ಮೇ 31ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿರುವ ಕಾರಣ ಅಲ್ಲಿನ ಪಟ್ಟಣ ಪಂಚಾಯಿತಿಗೆ ಚುನಾವಣೆಯನ್ನು ನಡೆಸುತ್ತಿಲ್ಲ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಿಪುರ, ಕಾವೇರಿಪುರ ವಾರ್ಡ್‌ಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ತುಮಕೂರು ಮಹಾನಗರ ಪಾಲಿಕೆಯ 22 ವಾರ್ಡ್‌ಗೆ ಸಹ ಮೇ 29ರಂದು ಉಪ ಚುನಾವಣೆ ನಡೆಯಲಿದೆ..

ಚುನಾವಣೆ ನಡೆಯುತ್ತಿಲ್ಲ

ಚುನಾವಣೆ ನಡೆಯುತ್ತಿಲ್ಲ

ಮೊದಲ ಹಂತದಲ್ಲಿ 109 ನಗರ ಸ್ಥಳೀಯ ಸಂಸ್ಥೆಗಳಿಗೆ 2018ರ ಆಗಸ್ಟ್‌ನಲ್ಲಿ ಚುನಾವಣೆ ನಡೆದಿತ್ತು. 2ನೇ ಹಂತದಲ್ಲಿ 103 ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಾಗಿತ್ತು. ಆದರೆ, ಕ್ಷೇತ್ರ ಪುನರ್ ವಿಂಗಡನೆ ಹಾಗೂ ವಾರ್ಡ್‌ವಾರು ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ 39 ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿವೆ. ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿರುವುದರಿಂದ ಅಲ್ಲಿನ ಪಟ್ಟಣ ಪಂಚಾಯಿತಿಯ ಚುನಾವಣೆಯನ್ನು ನಡೆಸುತ್ತಿಲ್ಲ.

ಚುನಾವಣಾ ವೇಳಾಪಟ್ಟಿ

ಚುನಾವಣಾ ವೇಳಾಪಟ್ಟಿ

* ಮೇ 9ರಂದು ಚುನಾವಣಾ ಅಧಿಸೂಚನೆ ಪ್ರಕಟ
* ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ
* ಮೇ 17 ನಾಮಪತ್ರಗಳ ಪರಿಶೀಲನೆ
* ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ
* ಮೇ 29 ಮತದಾನ
* ಮೇ 31 ಮತ ಎಣಿಕೆ

ನೀತಿ ಸಂಹಿತೆ ಜಾರಿಗೆ

ನೀತಿ ಸಂಹಿತೆ ಜಾರಿಗೆ

ಚುನಾವಣೆ ನಡೆಯುವ 63 ನಗರ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಮೇ 31ರ ತನಕ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. 63 ನಗರ ಸ್ಥಳೀಯ ಸಂಸ್ಥೆಗಳ 1361 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ಉಪ ಚುನಾವಣೆ

ಉಪ ಚುನಾವಣೆ

ಬಿಬಿಎಂಪಿಯ ಸಗಾಯಿಪುರ, ಕಾವೇರಿಪುರ, ತುಮಕೂರು ಮಹಾನಗರ ಪಾಲಿಕೆಯ 22ನೇ ವಾರ್ಡ್, ಹೆಬ್ಬಗೋಡಿ ನಗರಸಭೆ 26ನೇ ವಾರ್ಡ್, ಸದಲಗ ಪುರಸಭೆ ವಾರ್ಡ್ 19, ಮುಳಗಖೋಡ ಪುರಸಭೆ ವಾರ್ಡ್ 2ಕ್ಕೆ ಉಪ ಚುನಾವಣೆ ನಡೆಯಲಿದೆ. ಈ ಎಲ್ಲಾ ವಾರ್ಡ್‌ಗಳಲ್ಲಿ ಸದಸ್ಯರು ನಿಧನ ಹೊಂದಿರುವುದರಿಂದ ಉಪ ಚುನಾವಣೆ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+