ಏ.4ರಿಂದ ಶಿರಾಡಿ ಘಾಟ್ ರಸ್ತೆ ಕಾಮಗಾರಿ ಮತ್ತೆ ಆರಂಭ

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 29 : ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಮಗಾರಿ ಏ.4ರಿಂದ ಆರಂಭವಾಗಲಿದೆ. ಡಾಂಬರೀಕರಣ ಮತ್ತು ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಯನ್ನು 155 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತದೆ.

ಎರಡನೇ ಹಂತದಲ್ಲಿ ಶಿರಾಡಿ ಘಾಟ್‌ನ 21 ಕಿ.ಮೀ. ಡಾಂಬರೀಕರಣ ಕಾಮಗಾರಿ ಮತ್ತು 12.38 ಕಿ.ಮೀ.ಉದ್ದದ ಕಾಂಕ್ರಿಟ್ ರಸ್ತೆ ಕಾಮಗಾರಿ ನಡೆಯಲಿದೆ. ಕಾಮಗಾರಿಗಾಗಿ ರಸ್ತೆಯನ್ನು ಬಂದ್ ಮಾಡಲಾಗುತ್ತದೆಯೇ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. [ಶೀಘ್ರದಲ್ಲೇ ಪುನಃ ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್]

shiradi ghat

ಒಟ್ಟು 2 ಹಂತಗಳಲ್ಲಿ ಶಿರಾಡಿ ಘಾಟ್ ರಸ್ತೆಯನ್ನು ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆ ಯೋಜನೆ ರೂಪಿಸಿತ್ತು. ಅದರಂತೆ ಮೊದಲನೇ ಹಂತದ ಕಾಂಕ್ರಿಟ್ ರಸ್ತೆ ಕಾಮಗಾರಿಗಾಗಿ ಶಿರಾಡಿ ಘಾಟ್ ರಸ್ತೆಯನ್ನು 2015ರ ಜನವರಿ 2ರಿಂದ ಬಂದ್ ಮಾಡಲಾಗಿತ್ತು. ಆಗಸ್ಟ್‌ನಿಂದ ಪುನಃ ಸಂಚಾರ ಆರಂಭಿಸಲಾಗಿತ್ತು. [ಚಿತ್ರಗಳು : ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ಮುಕ್ತ-ಮುಕ್ತ]

'2ನೇ ಹಂತದ ಕಾಮಗಾರಿಗಾಗಿ ರಸ್ತೆಯನ್ನು ಬಂದ್ ಮಾಡುವ ಕುರಿತು ತೀರ್ಮಾನ ಕೈಗೊಂಡಿಲ್ಲ. ತಜ್ಞರ ತಂಡ ವರದಿ ನೀಡಿದ ಬಳಿಕ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುತ್ತದೆ' ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹಾದೇವಪ್ಪ ಅವರು ಕೆಲವು ದಿನಗಳ ಹಿಂದೆ ಹೇಳಿದ್ದರು. [ಹೆದ್ದಾರಿಗಳಿಗೆ ಅನುದಾನ, ಸಂಸದರೊಂದಿಗೆ ಸಭೆ]

ಸದ್ಯ, ಏಪ್ರಿಲ್ 4ರ ಸೋಮವಾರದಿಂದ ಕಾಮಗಾರಿ ಆರಂಭಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಈ ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಮಂಗಳೂರು ನಡುವಿನ ಪ್ರಯಾಣದ ಅವಧಿ 8 ರಿಂದ 6 ಗಂಟೆಗಳಿಗೆ ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Public Works Department is going to start 2nd phase road repair work at Shiradi Ghat from April 4, 2016. Repair work is being undertaken at the cost of Rs 155 core. Shiradi Ghat that connects Mangaluru with Bengaluru.
Please Wait while comments are loading...