ಪಿಯುಸಿ ಪತ್ರಿಕೆ ಉತ್ತರ ಬರೆದು ಮಾರುತ್ತಿದ್ದ ಇಬ್ಬರ ಬಂಧನ
ಬೆಂಗಳೂರು, ಏಪ್ರಿಲ್ 13 : ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 8 ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಲೋಕೊಪಯೋಗಿ ಇಲಾಖೆಯ ಜೆಇ ಕೆ.ಎಸ್ ರಂಗನಾಥ್, ರಿಯಲ್ ಎಸ್ಟೇಟ್ ಉದ್ಯಮಿ ಬಿ.ಅನಿಲ್ ಕುಮಾರ್ ಮತ್ತು ಟ್ಯುಟೋರಿಯಲ್ ಮಾಲೀಕ ಕೆ.ಎಮ್.ಮುರಳೀಧರ್ ಅವರನ್ನು ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. [ಪತ್ರಿಕೆ ಹಗರಣ : ಇಬ್ಬರು ಶಿಕ್ಷಕರು 9 ದಿನಗಳ ಕಾಲ ಸಿಐಡಿ ವಶಕ್ಕೆ]

ಈ ಮೂವರು ಆರೋಪಿಗಳು ಹಗರಣದ ಕಿಂಗ್ ಪಿನ್ ಎಂದು ಹೇಳಲಾಗುತ್ತಿರುವ ಶಿವಕುಮಾರಸ್ವಾಮಿ ಜೊತೆ ನಿರಂತರ ಸಂಪರ್ಕ ಹೊಂದಿದ್ದರು. ಪ್ರಶ್ನೆ ಪತ್ರಿಕೆ ಸಿಕ್ಕಿದ ಬಳಿಕ ಉತ್ತರ ಪತ್ರಿಕೆಯನ್ನು ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. [ಪಿಯು ಪತ್ರಿಕೆ ಖರೀದಿ ಆಗಿದೆ, ಮಾರಿದವರು ಯಾರು?]
ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಸಿಐಡಿ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ. ಮಾರ್ಚ್ 21 ಮತ್ತು 31 ರಂದು ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದೆ.[ಲೀಕಾಗಿದ್ದ ಕೆಮಿಸ್ಟ್ರಿ ಪಿಯು ಪ್ರಶ್ನೆ ಪತ್ರಿಕೆ ಬೆಲೆ 10 ಲಕ್ಷ ರು!]
ಬಂಧಿತರಾದವರು : ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಬೆಂಗಳೂರಿನ ಸದಾಶಿವ ನಗರದ ಪೂರ್ಣಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಕ ಅನಿಲ್, ಮತ್ತಿಕೆರೆ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಸತೀಶ್, ಬೆಂಗಳೂರಿನ ನಾಗರಬಾವಿಯ ಆದರ್ಶನಗರದ ಮಂಜುನಾಥ್, ಶ್ರೀರಾಮಪುರದ ಓಬಳರಾಜು ಹಾಗೂ ಮಲ್ಲೇಶ್ವರದ ಪಶ್ಚಿಮ ಪಾರ್ಕ್ ರಸ್ತೆಯ ರುದ್ರಪ್ಪ ಅವರನ್ನು ಬಂಧಿಸಲಾಗಿದೆ.












Click it and Unblock the Notifications