ಪತ್ರಿಕೆ ಸೋರಿಕೆ ಹಗರಣ, ಇಬ್ಬರು ದೈಹಿಕ ಶಿಕ್ಷಕರ ಬಂಧನ

ಬೆಂಗಳೂರು, ಏಪ್ರಿಲ್ 06 : ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪಶ್ನೆ ಪತ್ರಿಕೆ ಸೋರಿಕೆ ಹಗರಣದ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರಿನ ಸದಾಶಿವ ನಗರದ ಪೂರ್ಣಪ್ರಜ್ಞಾ ಕಾಲೇಜಿನ ದೈಹಿಕ ಶಿಕ್ಷಕ ಅನಿಲ್, ಮತ್ತಿಕೆರೆ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಸತೀಶ್ ಅವರನ್ನು ಬಂಧಿಸಲಾಗಿದೆ ಎಂದು ಸಿಐಡಿ ಡಿಐಜಿ ಸೋನಿಯಾ ನಾರಂಗ್ ಅವರು ತಿಳಿಸಿದ್ದಾರೆ. [ಪತ್ರಿಕೆ ಸೋರಿಕೆ, ಸಚಿವರ ಪಿಎ ಸೇರಿ ಮೂವರ ಬಂಧನ]

sonia narang

ಬಂಧಿತ ಆರೋಪಿಗಳು ಪ್ರಶ್ನೆ ಪತ್ರಿಕೆ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದರು. ಇದರಿಂದ ಕಮಿಷನ್ ಪಡೆಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್ 21ರಂದು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಗರಣಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧಿಸಲಾಗಿದೆ. [ವಿಶೇಷಾಧಿಕಾರಿ ಬಂಧನ, ಸಚಿವರು ಹೇಳಿದ್ದೇನು?]

ಆರೋಪಿಗಳು ಸಿಐಡಿ ವಶಕ್ಕೆ : ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಂಗಳೂರಿನ ನಾಗರಬಾವಿಯ ಆದರ್ಶನಗರದ ಮಂಜುನಾಥ್, ಶ್ರೀರಾಮಪುರದ ಓಬಳರಾಜು, ಹಾಗೂ ಮಲ್ಲೇಶ್ವರದ ಪಶ್ಚಿಮ ಪಾರ್ಕ್ ರಸ್ತೆಯ ರುದ್ರಪ್ಪ ಅವರನ್ನು ಬಂಧಿಸಲಾಗಿತ್ತು. ಆರೋಪಿಗಳನ್ನು ಏ.13ರ ತನಕ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿ, 1ನೇ ಎಸಿಎಂಎಂ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ. [ಪಿಯು ಪತ್ರಿಕೆ ಖರೀದಿ ಆಗಿದೆ, ಮಾರಿದವರು ಯಾರು?]

ಆರೋಪಿ ಓಬಳರಾಜು ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲರ ವಿಶೇಷ ಅಧಿಕಾರಿ ಆಗಿದ್ದರೆ, ಮಂಜುನಾಥ್ ವಿಜಯನಗರದ ನ್ಯೂ ಕೇಂಬ್ರಿಜ್‌ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದಾರೆ. ರುದ್ರಪ್ಪ ಅವರು, ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿಯ ಅಧೀಕ್ಷಕರಾಗಿದ್ದಾರೆ. [ಲೀಕಾಗಿದ್ದ ಕೆಮಿಸ್ಟ್ರಿ ಪಿಯು ಪ್ರಶ್ನೆ ಪತ್ರಿಕೆ ಬೆಲೆ 10 ಲಕ್ಷ ರು!]

ಪರೀಕ್ಷೆ ರದ್ದಾಗಿತ್ತು : 2016ರ ಮಾರ್ಚ್ 21ರಂದು 1.75 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಆ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+