ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ : 10 ಪ್ರಮುಖ ಬೆಳವಣಿಗೆಗಳು

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 31 : ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ 2ನೇ ಬಾರಿ ಸೋರಿಕೆಯಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಗೊಂಡಿದ್ದಾರೆ. ಪತ್ರಿಕೆ ಸೋರಿಕೆಯಾದ ಕಾರಣ ಗುರುವಾರ ನಡೆಯಬೇಕಿದ್ದ ಮರು ಪರೀಕ್ಷೆ ರದ್ದುಗೊಂಡಿದೆ. ಏ.12ರಂದು ಮರು ಪರೀಕ್ಷೆ ನಡೆಯಲಿದೆ.

ಮಾರ್ಚ್ 21ರಂದು 1.75 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಆ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಇಂದು ಮರುಪರೀಕ್ಷೆ ನಡೆಸುವುದಾಗಿ ಘೋಷಿಸಲಾಗಿತ್ತು. ಬೆಳಗ್ಗೆ 9 ಗಂಟೆಗೆ ಪರೀಕ್ಷೆ ಆರಂಭವಾಗಬೇಕಿತ್ತು. ಆದರೆ, ಮುಂಜಾನೆ 3.30ಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆ ರದ್ದುಗೊಳಿಸಲಾಯಿತು. [ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯ ಸರ್ಕಾರವೇ ಫೇಲ್!]

ಮರು ಪರೀಕ್ಷೆ ರದ್ದುಗೊಂಡಿದ್ದರಿಂದ ಆಕ್ರೋಶಗೊಂಡ ಪೋಷಕರು ಮತ್ತು ವಿದ್ಯಾರ್ಥಿಗಳು ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದರು. ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. [ಏಪ್ರಿಲ್ 12ಕ್ಕೆ ಮರು ಪರೀಕ್ಷೆ, ಎಕ್ಸಾಂ ಬರೆಯಲ್ಲ: ವಿದ್ಯಾರ್ಥಿಗಳು]

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆಯ 40 ಅಧಿಕಾರಿಗಳನ್ನು ಗುರುವಾರ ಅಮಾನತುಗೊಳಿಸಲಾಗಿದೆ. ಏ.12ರಂದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ದಿನಾಂಕ ಘೋಷಣೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆಗೆ ಸಂಬಂಧಿಸಿದಂತೆ ಗುರುವಾರ ನಡೆದ 10 ಪ್ರಮುಖ ಬೆಳವಣಿಗೆಗಳು ಇಲ್ಲಿವೆ...[ಪ್ರಶ್ನೆ ಪತ್ರಿಕೆ ಸೋರಿಕೆ, ಪಿಯು ವಿದ್ಯಾರ್ಥಿಗಳಲ್ಲಿ ಭುಗಿಲೆದ್ದ ಆಕ್ರೋಶ]

ಇಂದು ನಡೆಯಬೇಕಿದ್ದ ಮರು ಪರೀಕ್ಷೆ ರದ್ದು

ಇಂದು ನಡೆಯಬೇಕಿದ್ದ ಮರು ಪರೀಕ್ಷೆ ರದ್ದು

ಗುರುವಾರ ಮುಂಜಾನೆ ತುಮಕೂರು ಮತ್ತು ಬೆಂಗಳೂರಿನಲ್ಲಿ ಇಂದು ನಡೆಯಬೇಕಿದ್ದ ರಸಾಯನಶಾಸ್ತ್ರ ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಯಿತು. ಮುಂಜಾನೆ 3.30ರ ಸುಮಾರಿಗೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಾಹಿತಿ ರವಾನಿಸಿದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಅಕುರಾತಿ ಅವರು, 'ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಇಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಾರದು' ಎಂದು ಮಾಧ್ಯಮದ ಮೂಲಕ ಮನವಿ ಮಾಡಿದರು.

ಪೋಷಕರು, ವಿದ್ಯಾರ್ಥಿಗಳ ಪ್ರತಿಭಟನೆ

ಪೋಷಕರು, ವಿದ್ಯಾರ್ಥಿಗಳ ಪ್ರತಿಭಟನೆ

ಮರು ಪರೀಕ್ಷೆ ರದ್ದುಗೊಂಡಿದ್ದರಿಂದ ಆಕ್ರೋಶಗೊಂಡ ಪೋಷಕರು ಮತ್ತು ವಿದ್ಯಾರ್ಥಿಗಳು ಮಲ್ಲೇಶ್ವರದಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದರು. ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳು ಮಕ್ಕಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ ಎಂದು ದೂರಿದರು.

ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು

ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು

ವಿಧಾನಸಭೆ ಕಲಾಪದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, 'ಮೂರು ವರ್ಷಗಳಿಂದ ಸಚಿವರಾಗಿದ್ದೀರಿ. ಇಲಾಖೆಯ ಅಧಿಕಾರಿಗಳ ಮೇಲೆ ಹಿಡಿತವಿಲ್ಲವೇ?. ಪದೇ-ಪದೇ ಪ್ರಶ್ನೆ ಪತ್ರಿಕೆ ಹೇಗೆ ಸೋರಿಕೆಯಾಗಲು ಸಾಧ್ಯ?, ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ನೀಡಿ' ಎಂದು ಸಚಿವ ಕಿಮ್ಮನೆ ರತ್ನಾಕರ ಅವರನ್ನು ಒತ್ತಾಯಿಸಿದರು.

ಉತ್ತರ ನೀಡಿದ ಸಚಿವರು

ಉತ್ತರ ನೀಡಿದ ಸಚಿವರು

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ವಿಧಾನಸಭೆಯಲ್ಲಿ ಉತ್ತರ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು, 'ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರೇ ಇದಕ್ಕೆ ನೇರಹೊಣೆ, ನಾನು ನೈತಿಕ ಹೊಣೆ ಹೊರಲು ಸಿದ್ಧವಾಗಿದ್ದೇನೆ. ಪತ್ರಿಕೆ ಸೋರಿಕೆಯಾದ ಬಗ್ಗೆ ನಿರ್ದೇಶಕರಿಂದ ವರದಿ ಕೇಳಲಾಗಿದೆ. ಯಾವುದೇ ಅಧಿಕಾರಿಗಳು ಇದರಲ್ಲಿ ಪಾಲ್ಗೊಂಡಿದ್ದರೂ ಅವರನ್ನು ಅಮಾನತು ಮಾಡಲಾಗುತ್ತದೆ' ಎಂದು ಹೇಳಿದರು.

ರಾಜೀನಾಮೆ ಅಗತ್ಯವಿಲ್ಲ

ರಾಜೀನಾಮೆ ಅಗತ್ಯವಿಲ್ಲ

ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಪಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಸಚಿವ ಕಿಮ್ಮನೆ ರತ್ನಾಕರ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ' ಎಂದರು.

ಏ.12ರಂದು ಮರು ಪರೀಕ್ಷೆ

ಏ.12ರಂದು ಮರು ಪರೀಕ್ಷೆ

ಇಂದು ನಡೆಯಬೇಕಿದ್ದ ರಸಾಯನಶಾಸ್ತ್ರ ಮರು ಪರೀಕ್ಷೆ ರದ್ದುಗೊಂಡಿದೆ. ಏ.12ರಂದು ಮರು ಪರೀಕ್ಷೆ ನಡೆಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

40 ಅಧಿಕಾರಿಗಳ ಅಮಾನತು

40 ಅಧಿಕಾರಿಗಳ ಅಮಾನತು

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ 40 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಇಬ್ಬರು ಸಿಐಡಿ ಪೊಲೀಸರ ವಶಕ್ಕೆ

ಇಬ್ಬರು ಸಿಐಡಿ ಪೊಲೀಸರ ವಶಕ್ಕೆ

ರಸಾಯನಶಾಸ್ತ್ರ ಪಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. 5 ಅಧಿಕಾರಿಗಳ ತಂಡ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತನಿಖೆಯನ್ನು ನಡೆಸುತ್ತಿದ್ದು, ಬೆಂಗಳೂರಿನಲ್ಲಿ ಇಂದು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.

ವಿಧಾನಸೌಧದಲ್ಲಿ ಮಹತ್ವದ ಸಭೆ

ವಿಧಾನಸೌಧದಲ್ಲಿ ಮಹತ್ವದ ಸಭೆ

ಸಚಿವ ಕಿಮ್ಮನೆ ರತ್ನಾಕರ್, ಸ್ಪೀಕರ್ ಕಾಗೋಡು ತಿಮ್ಮಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಪಲ್ಲವಿ ಅಕುರಾತಿ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆಯಿತು. ಸಭೆಯಲ್ಲಿ ಏ.12ರಂದು ಮರು ಪರೀಕ್ಷೆ ನಡೆಸುವ ತೀರ್ಮಾನವನ್ನು ಕೈಗೊಳ್ಳಲಾಯಿತು.

ಸಿಐಡಿ ಅಧಿಕಾರಿಗಳಿಂದ ವಿಚಾರಣೆ

ಸಿಐಡಿ ಅಧಿಕಾರಿಗಳಿಂದ ವಿಚಾರಣೆ

ಸಿಐಡಿ ಡಿಐಜಿ ಸೋನಿಯಾ ನಾರಂಗ್ ಸೇರಿದಂತೆ ಸಿಐಡಿಯ 8 ಅಧಿಕಾರಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಭೇಟಿ ನೀಡಿದ್ದು, ಇಲಾಖೆ ನಿರ್ದೇಶಕಿ ಪಲ್ಲವಿ ಅಕುರಾತಿ ಸೇರಿದಂತೆ ಹಿರಿಯ ಅಧಿಕಾರಿಗಳ ವಿಚಾರಣೆ ನಡೆಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Several students and their parents have launched protests across Karnataka after 2nd PUC Chemistry paper were leaked. The Department Of Pre University Education has cancelled re-exam scheduled on March 31st, 2016. Here are the top ten developments of Thursday.
Please Wait while comments are loading...