Karnataka PUC-2 Result 2024: ಇಂದು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ: ರಿಸಲ್ಟ್ ನೋಡುವುದು ಹೇಗೆ?
ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು (ಮೇ 21) ಪ್ರಕಟವಾಗಲಿದೆ. ಈಗಾಗಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಡೆಸಿದ ಪರೀಕ್ಷೆಯ ಫಲಿತಾಂಶ ಇದಾಗಿದೆ. ಈ ಫಲಿತಾಂಶವನ್ನು ಆನ್‌ಲೈನ್ ಮೂಲಕ ಪಡೆಯುವುದು ಹೇಗೆ? ಸಂಪೂರ್ಣ ವಿವರ ಇಲ್ಲಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಬಿಡುಗಡೆ ಮಾಡಲಾಗುತ್ತದೆ. ಮೊದಲ ಬಾರಿಗೆ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಎರಡನೇ ಬಾರಿಗೆ ಏಪ್ರಿಲ್ 29 ರಿಂದ 16ರವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

ವಿಶೇಷ ಅಂದರೆ ಈ ವರ್ಷದಿಂದಲೇ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ವಿದ್ಯಾರ್ಥಿಗಳಿಗೆ ಸಿಗಲಿದೆ. ಹಾಗಾದರೆ ಇಂದು ಬಿಡುಗಡೆಯಾಗುವ ಫಲಿತಾಂಶವನ್ನು ಆನ್‌ಲೈನ್ ಮೂಲಕ ನೋಡುವುದು ಹೇಗೆ ಎಂದು ತಿಳಿಯೋಣ. ಫಲಿತಾಂಶವನ್ನು https://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
ಫಲಿತಾಂಶವನ್ನು ನೋಡುವುದು ಹೇಗೆ?
*https://karresults.nic.in ಮುಖಪುಟದಲ್ಲಿ ಎರಡನೇ ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ಓಪನ್ ಮಾಡಿ.
*ಲಾಗಿನ್ ಆದ ಬಳಿಕ ಅಲ್ಲಿ ನಿಮ್ಮ ನೋಂದಣಿ ಸಂಖ್ಯೆ ಕೇಳಲಾಗುತ್ತದೆ. ಅದನ್ನು ಟೈಪ್ ಮಾಡಿ.
*ನಂತರ ನೀವು ಯಾವ ವಿಭಾಗವೆಂದು ಅಂದರೆ ವಾಣಿಜ್ಯ, ವಿಜ್ಞಾನ, ಕಲೆ ಆಯ್ಕೆ ಮಾಡಿ ಕ್ಲಿಕ್ ಮಾಡಿ.
*ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶ ಪರದೆ ಮೇಲೆ ಕಾಣಿಸುತ್ತದೆ.
*ಇದರಲ್ಲಿ ನೀವು ಫಲಿತಾಂಶವನ್ನು ಡೌನ್‌ಲೋಡ್ ಕೂಡ ಮಾಡಿಕೊಳ್ಳಬಹುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷರಾದ ಎನ್. ಮಂಜುಶ್ರೀ ಸಾಮಾಜಿಕ ಜಾಲತಾಣದಲ್ಲಿ ಫಲಿತಾಂಶ ಮಂಗಳವಾರ ಪ್ರಕಟಿಸುವ ಕುರಿತು ಸೋಮವಾರ ಪೋಸ್ಟ್ ಹಾಕಿದ್ದಾರೆ. ವಿದ್ಯಾರ್ಥಿಗಳು ಮಂಗಳವಾರ ಪ್ರಕಟಿಸುವ ಕುರಿತು ಪೋಸ್ಟ್ ಹಾಕಿದ್ದಾರೆ.
ಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಒಂದು ವಿಷಯಕ್ಕೆ ರೂ. 140, ಎರಡು ವಿಷಯಕ್ಕೆ 270 ರೂ. ಮತ್ತು ಮೂರು ಅಥವ ಹೆಚ್ಚಿನ ವಿಷಯಗಳಿಗೆ 400 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಎಸ್‌ಸಿ/ ಎಸ್‌ಟಿ ಹಾಗೂ ಪ್ರವರ್ಗ-1 ವಿದ್ಯಾರ್ಥಿಗಳಿಗೆ ಶುಲ್ಕ ಇರಲಿಲ್ಲ.












Click it and Unblock the Notifications