2nd PUC Exam Timetable: ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿ ಪ್ರಕಟ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
2nd PUC Exam Timetable: ರಾಜ್ಯದಲ್ಲಿ ಮಾರ್ಚ್ 1ರಿಂದ 20ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 8ರಂದು ಫಲಿತಾಂಶ ಪ್ರಕಟವಾಗಿತ್ತು. ಇದರ ಬೆನ್ನಲ್ಲೇ ಇದೀಗ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸುವ ಪರೀಕ್ಷೆ-2 ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪರೀಕ್ಷೆ-1 ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಉತ್ತೀರ್ಣ ಫಲಿತಾಂಶದಲ್ಲಿ ಜಿಲ್ಲಾವಾರು ನೋಡೋದಾದ್ರೆ ಉಡುಪಿ ಮೊದಲ ಸ್ಥಾನ, ನಂತರ ದಕ್ಷಿಣ ಕನ್ನಡ, ಕೊನೇ ಸ್ಥಾನದಲ್ಲಿ ಯಾದಗರಿ ಇದೆ. ಇನ್ನೂ ಇದೀಗ ಮೊದಲ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ-2 ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಪರೀಕ್ಷೆ-2 ಏಪ್ರಿಲ್ 24ರಿಂದ ಆರಂಭ ಆಗಲಿದ್ದು, ಮೇ 8ರವರೆಗೆ ನಡೆಯಲಿದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಹಾಕಿ ಹಾಕಿ ಪರೀಕ್ಷೆಯನ್ನು ಬರೆಯಬಹುದಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-೨ರ ವೇಳಾಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ ಗಮನಿಸಿ.
ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿ
* ಏಪ್ರಿಲ್ 24: ಕನ್ನಡ, ಅರೇಬಿಕ್
* ಏಪ್ರಿಲ್ 25: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಜೀವಶಾಸ್ತ್ರ
* ಏಪ್ರಿಲ್ 26: ಇತಿಹಾಸ, ಭೌತಶಾಸ್ತ್ರ
* ಏಪ್ರಿಲ್ 28: ಭೂಗೋಳಶಾಸ್ತ್ರ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
* ಏಪ್ರಿಲ್ 29: ಇಂಗ್ಲೀಷ್
* ಮೇ 02: ತರ್ಕಶಾಸತ್ರ, ವ್ಯವಹಾರ ಶಾಸ್ತ್ರ, ಗಣಿತ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ.
* ಮೇ 3: ಸಮಾಜಶಾಸ್ತ್ರ, ಭೂರ್ಗರ್ಭಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕಶಾಸ್ತ್ರ
* ಮೇ 5: ಅರ್ಥಶಾಸ್ತ್ರ
* ಮೇ 6: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
* ಮೇ 7: ಹಿಂದಿ
* ಮೇ : 8 ತಮಿಳು, ತೆಲುಗು,ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಅರ್ಜಿ ಸಲ್ಲಿಸಲು ಕೊನೇ ದಿನ ಯಾವಾಗ?: ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋದಯಿಸಿಕೊಳ್ಳಲು ಏಪ್ರಿಲ್ 8 2025ರಿಂದ ಅವಕಾಶ ಕಲ್ಪಿಸಿಕೊಡಲಾಗಿದ್ದು, ಏಪ್ರಿಲ್ 17 ಕೊನೇ ದಿನವಾಗಿದೆ. ವಿದ್ಯಾರ್ಥಿಗಳು ತಮ್ಮ ತಮ್ಮ ಕಾಲೇಜಿನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಇನ್ನು ಏಪ್ರಿಲ್ 16ರಿಂದ 17ರಂದು ಅರ್ಜಿ ಸಲ್ಲಿಸುವವರು ದಂಡ ಕಟ್ಟಬೇಕಾಗುತ್ತದೆ. ಇದಕ್ಕಿಂತ ಮುಂಚೆ ಅರ್ಜಿ ಅಲ್ಲಿಕೆ ಮಾಡಿದವರಿಗೆ ಯಾವುದೇ ದಂಡ ಇರುವುದಿಲ್ಲ.
ದ್ವಿತೀಯ ಪಿಯುಸಿ ಪರೀಕ್ಷೆ-2, 3 ಬರೆಯುವುದಕ್ಕೆ ಅನುತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಸಂಪೂರ್ಣ ಪರೀಕ್ಷಾ ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದು, ಅನುತ್ತೀರ್ಣರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸದೆ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶಗಳನ್ನು ಇತ್ತೀಗಷ್ಟೇ ಪ್ರಕಟ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಕಳೆದ ವರ್ಷದ ಶೇಕಡಾ 81.15ಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ ಶೇಕಡ 7.7ರಷ್ಟು ಕುಸಿತವಾಗಿದೆ.












Click it and Unblock the Notifications