ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯುಸಿ ಪರೀಕ್ಷೆ; ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 02 : ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆ 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಾರ್ಚ್ 4 ರಿಂದ 19ರ ತನಕ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ತಾತ್ಕಾಲಿಕ ವೇಳಾಪಟ್ಟಿಗೆ ಬರುವ ಆಕ್ಷೇಪಣೆಗಳನ್ನು ಸ್ವೀಕರಿಸಿದ ಬಳಿಕ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ದ್ವಿತೀಯ ಪಿಯುಸಿ ಫಲಿತಾಂಶ: ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?ದ್ವಿತೀಯ ಪಿಯುಸಿ ಫಲಿತಾಂಶ: ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

ಮಾರ್ಚ್ 8 ಮತ್ತು 15ರಂದು ಭಾನುವಾರವಾದ ಕಾರಣ ಪರೀಕ್ಷೆಗಳು ನಡೆಯಯವುದಿಲ್ಲ. ಪರೀಕ್ಷೆಯ ಮೊದಲ ದಿನವಾದ ಮಾರ್ಚ್ 4ರಂದು ಇಂಗ್ಲಿಶ್, ಬೌತಶಾಸ್ತ್ರ, ಬೇಸಿಕ್ ಮ್ಯಾಥ್ಸ್ ಪರೀಕ್ಷೆಗಳು ನಡೆಯಲಿವೆ. ಮಾರ್ಚ್ 5ರಂದು ತಮಿಳು, ತೆಲಗು, ಮಲೆಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್ ಪರೀಕ್ಷೆಗಳು ನಡೆಯಲಿವೆ.

ಚಿತ್ರವಿವರ: ದ್ವಿತೀಯ ಪಿಯುಸಿ ಫಲಿತಾಂಶ- ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?ಚಿತ್ರವಿವರ: ದ್ವಿತೀಯ ಪಿಯುಸಿ ಫಲಿತಾಂಶ- ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?

2nd PUC Exam 2020 Provisional Time Table Announced

ಮಾರ್ಚ್ 6ರಂದು ಉರ್ದು, ಸಂಸ್ಕೃತ, ಮಾರ್ಚ್ 7ರಂದು ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ. ಮಾರ್ಚ್ 9ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ಗಣಿತ. ಮಾರ್ಚ್ 11ರಂದು ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್. ಮಾರ್ಚ್ 12ರಂದು ಬಿಜಿನೆಸ್ ಸ್ಟಡೀಸ್, ಸಮಾಜಶಾಸ್ತ್ರ ರಸಾಯನ ಶಾಸ್ತ್ರ. ಮಾರ್ಚ್ 13ರಂದು ಭೂಗೋಳಶಾಸ್ತ್ರ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ.

ಒಂದು ಕಾಲದಲ್ಲಿ ಜೆಎನ್‌ಯು ಸೆಕ್ಯೂರಿಟಿ ಈಗ ಅದೇ ಕಾಲೇಜಿನ ವಿದ್ಯಾರ್ಥಿ ಒಂದು ಕಾಲದಲ್ಲಿ ಜೆಎನ್‌ಯು ಸೆಕ್ಯೂರಿಟಿ ಈಗ ಅದೇ ಕಾಲೇಜಿನ ವಿದ್ಯಾರ್ಥಿ

ಮಾರ್ಚ್ 14 ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ. ಮಾರ್ಚ್ 16 ಅರ್ಥಶಾಸ್ತ್ರ, ಜೀವಶಾಸ್ತ್ರ. ಮಾರ್ಚ್ 17 ಹಿಂದಿ, ಮಾರ್ಚ್ 18 ಕನ್ನಡ ಮತ್ತು ಮಾರ್ಚ್ 19 ಇಂಗ್ಲಿಷ್.

English summary
Department of pre university education Karnataka published provisional time table for 2nd PUC exam March 2020. Final time-table will be published after considering objections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X