ಏ. 22 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಜೆರಾಕ್ಸ್ ಅಂಗಡಿ ತೆರೆಯುವಂತಿಲ್ಲ

ಬೆಂಗಳೂರು, ಏ. 19: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ಏಪ್ರಿಲ್ 21 ರಿಂದ ಮೇ. 18 ರ ವರೆಗೆ ರಾಜ್ಯದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಮೊದಲ ಹಂತದಲ್ಲಿ ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಆದೇಶ ಹೊರಡಿಸಿದ್ದಾರೆ.

ಏ. 21 ರಿಂದ ರಾಜ್ಯದ ಒಂದು ಸಾವಿರ ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಸುಮಾರು 6.84 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಣಿ ಮಾಡಿದ್ದಾರೆ. ಸುವ್ಯವಸ್ಥಿತ ಪರಿಕ್ಷೆಗೆ ಸುರಕ್ಷತಾ ಕ್ರಮ ಭಾಗವಾಗಿ ಇದೀಗ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮೊದಲ ಹಂತದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು, ಬೆಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಆಯಾ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಿದ್ದಾರೆ.

2nd PUC Exam 2021-22: prohibitory order imposed around the PUC Exam centers

ಜಿಲ್ಲಾಧಿಕಾರಿಗಳು ನೀಡಿರುವ ವರದಿ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಅಂಗಡಿ ಬಾಗಿಲು ತೆಗೆಯದಂತೆ ಸೂಚಿಸಲಾಗಿದೆ. ಇದೇ ರೀತಿಯ ಆದೇಶ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಹೊರ ಬೀಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+