Get Updates
Get notified of breaking news, exclusive insights, and must-see stories!

PUC ವಿದ್ಯಾರ್ಥಿಗಳಿಗೆ KSRTC ಯಲ್ಲಿ ಉಚಿತ ಪ್ರಯಾಣ, ಹಾಲ್ ಟಿಕೆಟ್ ತೋರಿಸಿದ್ರೆ ಸಾಕು..!!

ಬೆಂಗಳೂರು, ಏಪ್ರಿಲ್ 16 : ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಸಿಹಿಸುದ್ದಿ ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳವರೆಗೆ ಉಚಿತವಾಗಿ ಪ್ರಯಾಣಿಸುವ ಅವಕಾಶ ಕಲ್ಪಿಸಿದೆ. ಅಲ್ಲದೆ ಪರೀಕ್ಷೆ ಮುಗಿದ ನಂತರ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಸರ್ಕಾರಿ ಬಸ್‌ನಲ್ಲಿ ವಾಪಾಸ್‌ ತೆರಳಬಹುದಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವ ಹಿನ್ನಲೆ ವಿದ್ಯಾರ್ಥಿಗಳು ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳು ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಕ.ರಾ.ರ.ಸಾ.ನಿಗಮದ ಬಳಿ ಮನವಿ ಮಾಡಿಕೊಂಡಿತ್ತು.

2nd PUC Exam 2022: PUC students to get free bus travel to attend exams

ಸದ್ಯ ಮನವಿಯನ್ನ ಸ್ವೀಕರಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ನಿಗಮದ ಎಲ್ಲಾ ಚಾಲಕ/ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಬೇಕೆಂದು ಸೂಚಿಸಿದೆ.

2nd PUC Exam 2022: PUC students to get free bus travel to attend exams

ಇದರ ಜೊತೆಗೆ ಬಸ್ಸುಗಳ ಸಂಚರಿಸುವ ಮಾರ್ಗದಲ್ಲಿ ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಅಥವಾ ಪ್ರಯಾಣ ಮಾರ್ಗದಲ್ಲೇ ಪರೀಕ್ಷಾ ಕೇಂದ್ರಗಳಿದ್ದಲ್ಲಿ ವಿದ್ಯಾರ್ಥಿಗಳು ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಅಂತ ಕೆಎಸ್‌ಆರ್‌ಟಿಸಿ ನಿಗಮ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+