ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡಗೆ ಕ್ಷಣಗಣನೆ; ಸಮಯ, ವೀಕ್ಷಣೆ ಮಾಡುವುದೇಗೆ?
2nd Puc Result 2025: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಗಿದಿದೆ. ಇದೀಗ ಫಲಿತಾಂಶ ಪ್ರಕಟದ ಬಗ್ಗೆ ಬಿಗ್ ಅಪ್ಡೇಟ್‌ವೊಂದು ಲಭ್ಯವಾಗಿದೆ. ನಾಳೆ ಅಂದರೆ (ಏಪ್ರಿಲ್ 8) ರಿಸಲ್ಟ್ ಘೋಷಣೆಯಾಗಿದೆ. ಹಾಗಾದ್ರೆ ಸಮಯ ಹಾಗೂ ಪರಿಶೀಲನೆ ಮಾಡುವುದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2025ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟ ಮಾಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1ರಿಂದ ಆರಂಭವಾಗಿದ್ದು, ಮಾರ್ಚ್ 20ಕ್ಕೆ ಮುಕ್ತಾಯವಾಗಿದ್ದವು. ಇನ್ನು ಮಾರ್ಚ್ 21 ರಂದು ಆನ್ಸರ್ ಕೀ ಬಿಡುಗಡೆ ಮಾಡಲಾಗಿತ್ತು. ಇನ್ನುಏಪ್ರಿಲ್ 8ರಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿ ಮೂಲಕ ಫಲಿತಾಂಶ ಪ್ರಕಟ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಬಳಿಕ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಫಲಿತಾಂಶ ವೀಕ್ಷಣೆ ಮಾಡಬಹುದು. ಅಲ್ಲದೆ, ಅಂಕಪಟ್ಟಿಯನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ನಾಳೆ (ಏಪ್ರಿಲ್ 8) ಮಧ್ಯಾಹ್ನ 12.30ಕ್ಕೆ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 1.30ರ ಬಳಿಕ ವಿದ್ಯಾರ್ಥಿಗಳಿಗೆ ಅಧಿಕೃತ ವೆಬ್‌ಸೈಟ್ https://karresults.nic.in/ ನಲ್ಲಿ ಫಲಿತಾಂಶ ಲಭ್ಯ ಇರಲಿದೆ. ರಾಜ್ಯಾದ್ಯಂತ ಮಾರ್ಚ್ 1ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.
ಫಲಿತಾಂಶ ವೀಕ್ಷಣೆ ಮಾಡುವುದು ಹೇಗೆ?
* ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಬೇಕು.
* ಹೋಂ ಪೇಜ್‌ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
* ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ನಮೂದಿಸಬೇಕು.
* Second PU Results 2025 ಎಂದು ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ. ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು.
* ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬಹುದು.

ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದರು. ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಅಂಕಗಳಲ್ಲಿ ಯಾರು ಮೇಲುಗೈ?: ಇನ್ನು ಕಳೆದ ಮೂರು ವರ್ಷಗಳ ದ್ವಿತೀಯ ಪಿಯುಸಿ ಫಲಿತಾಂಶಗಳಲ್ಲಿ ಸತತವಾಗಿ ವಿದ್ಯಾರ್ಥಿನಿಯರು ಹುಡುಗರಿಗಿಂತ ಮೇಲುಗೈ ಸಾಧಿಸಿದ್ದಾರೆ. 2022ರಲ್ಲಿ ಶೇಕಡ 13.5ರಷ್ಟು ಗಮನಾರ್ಹ ಅಂತರದೊಂದಿಗೆ ಮೇಲುಗೈ ಸಾಧಿಸಿದ್ದರು. ಹಾಗಾದ್ರೆ ಈ ಬಾರಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂದು ಕಾದುನೋಡಬೇಕಿದೆ ಅಷ್ಟೇ. ಒಟ್ಟಿನಲ್ಲಿ ಫಲಿತಾಂಶಕ್ಕಾಗಿ ಕಾಯುತ್ತಿದ್ದವರಿಗೆ ಇದೀಗ ಫಲಿತಾಂಶ ಪ್ರಕಟದ ಬಗ್ಗೆ ಮಾಹಿತಿ ಸಿಕ್ಕಂತಾಗಿದೆ. ಫಲಿತಾಂಶ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ವೀಕ್ಷಣೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ.












Click it and Unblock the Notifications