ದ್ವಿತೀಯ ಪಿಯುಸಿ: ಪರೀಕ್ಷೆ-3ಕ್ಕೆ ಅರ್ಜಿ ಸಲ್ಲಿಸುವ ದಿನಾಂಕ ಘೋಷಣೆ
ಬೆಂಗಳೂರು, ಮೇ 21: ಕರ್ನಾಟಕದ 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈಗ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅರ್ಜಿ ಸಲ್ಲಿಕೆ ಮಾಡುವ ದಿನಾಂಕ ಘೋಷಣೆ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಅಧ್ಯಕ್ಷರು ಸುತ್ತೊಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆ 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಬಗ್ಗೆ ಎಂಬ ವಿಷಯ ಒಳಗೊಂಡಿದೆ.

ಸುತ್ತೋಲೆಯ ವಿವರಗಳು: 2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ ನಿಗದಿಪಡಿಸಲಾಗಿದೆ. ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸುವುದು, ಪ್ರಾಂಶುಪಾಲರುಗಳು ಸೂಚನೆಗಳನ್ನು ಪಾಲಿಸುವುದು ಎಂದು ಹೇಳಿದೆ.
* 2024ರ ಪರೀಕ್ಷೆ-1 ಮತ್ತು 2 ರಲ್ಲಿ ಉತ್ತೀರ್ಣರಾಗಿದ್ದು ಫಲಿತಾಂಶ ಉತ್ತಮಪಡಿಸಿಕೊಳ್ಳಲು 2024ರ ದ್ವಿತೀಯ ಪಿಯುಸಿ ಪರೀಕ್ಷೆ-3 ಅನ್ನು ಬರೆಯಲು ಇಚ್ಚಿಸಿದಲ್ಲಿ, ಅಂತಹ ವಿದ್ಯಾರ್ಥಿಗಳು ಫಲಿತಾಂಶ ಪಟ್ಟಿಯ ಆಧಾರದ ಮೇಲೆ ನಿಯಮಾನುಸಾರ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅರ್ಜಿಯನ್ನು ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಸಲ್ಲಿಸುವುದು.
* ಸದರಿ ಪ್ರಕ್ರಿಯೆಗೆ ಮಂಡಲಿಯ ಅನುಮತಿ ಪಡೆಯುವ ಅವಶ್ಯಕತೆ ಇರುವುದಿಲ್ಲ. ವಿದ್ಯಾರ್ಥಿಗಳು ಫಲಿತಾಂಶ ಉತ್ತಮಪಡಿಸಿಕೊಳ್ಳಲು ONLINE ಮುಖಾಂತರವೂ ಅರ್ಜಿ ಸಲ್ಲಿಸಬಹುದಾಗಿದೆ. 2024ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಉತ್ತೀರ್ಣರಾದ/ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅವಕಾಶವಿರುವುದಿಲ್ಲ.
* ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಅನುತ್ತೀರ್ಣ ಅಂಕಪಟ್ಟಿ ಅರ್ಜಿ (MCA) ಗಳನ್ನು ಮಂಡಲಿಯಿಂದ ನೀಡಲಾಗುವುದಿಲ್ಲ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ನೀಡಲಾಗುವ ಫಲಿತಾಂಶ ಪಟ್ಟಿಯ (RESULT SHEET) ಆಧಾರದ ಮೇಲೆ ಪರೀಕ್ಷೆ-3 ಕ್ಕೆ ನೋಂದಾಯಿಸಿಕೊಂಡು ಪರೀಕ್ಷಾ ಶುಲ್ಕ ಸ್ವೀಕರಿಸಿ ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು.
* ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆ-1 ಮತ್ತು ಪರೀಕ್ಷೆ-2 ಅನ್ನು ಬರೆಯದೇ ಇರುವ ವಿದ್ಯಾರ್ಥಿಗಳು ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು Online Registration ಮಾಡುವ ಮೂಲಕವೂ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳಬಹುದಾಗಿದೆ.
* ಮಾರ್ಚ್ 2024ರ ಪರೀಕ್ಷೆ-1ಕ್ಕೆ ನೋಂದಾಯಿಸಿದ್ದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ-3ಕ್ಕೆ Online ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ. ನೋಂದಾಯಿಸಿಕೊಳ್ಳಲು ಮಂಡಲಿಯ ಜಾಲತಾಣ https://kseab.karnataka.gov.in ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗೆ ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ. ನೋಂದಾವಣಿಗೆ ಫ್ಲೋ ಚಾರ್ಟ್ ಅನ್ನು ಅದರಂತೆ ನೋಂದಾಯಿಸಿಕೊಳ್ಳುವುದು.
* 2024ನೇ ಸಾಲಿಗಿಂತ ಹಿಂದಿನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ ಅರ್ಜಿ ಅಥವಾ ಹಿಂದಿನ ಎಂ.ಸಿ.ಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಪ್ರಾಂಶುಪಾಲರು ಮಂಡಲಿಯ PU EXAM ಲಾಗಿನ್‌ನಲ್ಲಿ ವಿದ್ಯಾರ್ಥಿಗಳ ಮಾಹಿತಿಯನ್ನು ಭರ್ತಿ ಮಾಡುವುದು.
* 2006 ರಿಂದ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಂದ ಮೂಲ ಅನುತ್ತೀರ್ಣ ಅಂಕಪಟ್ಟಿ/ ಅರ್ಜಿ ಅಥವಾ ಹಿಂದಿನ ಎಂ.ಸಿ.ಎಗಳ ಆಧಾರದ ಮೇಲೆ ಪರೀಕ್ಷಾ ಶುಲ್ಕಗಳನ್ನು ಸ್ವೀಕರಿಸಿ ಸಂಬಂಧಿಸಿದ ದಾಖಲೆಗಳನ್ನು ಪ್ರಾಂಶುಪಾಲರು ದೃಢೀಕರಿಸಿ, ಮಂಡಲಿಗೆ ಸಲ್ಲಿಸುವುದು.
2024ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕ. ಪುನರಾವರ್ತಿತ ಅಭ್ಯರ್ಥಿಗಳು ಪಾವತಿಸಬೇಕಾದ ಪರೀಕ್ಷಾ ಶುಲ್ಕ
(ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಒಂದು ವಿಷಯಕ್ಕೆ 140, ಎರಡು ವಿಷಯಕ್ಕೆ 270, ಮೂರು ಅಥವಾ ಹೆಚ್ಚಿನ ವಿಷಯಗಳು
400 ರೂ.ಗಳು.
2023-24 ನೇ ಸಾಲಿನ ಹೊಸಬರು ಮತ್ತು ಖಾಸಗಿಯಾಗಿ ನೋಂದಾವಣೆಯಾದ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ONLINEನಲ್ಲಿ ಸಂದಾಯಿಸಬೇಕಾದ PORTAL ಶುಲ್ಕ ರೂ. 10.
ಫಲಿತಾಂಶ ಉತ್ತಮಪಡಿಸಿಕೊಳ್ಳಲು (IMPROVEMENT) ಪಾವತಿಸಬೇಕಾದ ಶುಲ್ಕ ಪ್ರಥಮ ಬಾರಿಗೆ ಒಂದು ವಿಷಯಕ್ಕೆ ರೂ. 175. 2024ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ನಿಗದಿಪಡಿಸಿರುವ ದಿನಾಂಕ.
ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ಮಾಹಿತಿಯನ್ನು ಪ್ರಾಂಶುಪಾಲರು ಮಂಡಲಿಯ PU EXAM ಲಾಗಿನ್‌ನಲ್ಲಿ ಇಂದೀಕರಿಸಲು ಕೊನೆಯ ದಿನಾಂಕ ದಂಡ ರಹಿತ 23/5/2024 ರಿಂದ 28/5/2024. ದಂಡ ಸಹಿತ (ದಿನಕ್ಕೆ ರೂ. 50ರಂತೆ) 29/5/2024 ರಿಂದ 30/5/2024ರ ತನಕ.
ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕಾದ ದಿನಾಂಕ ದಂಡರಹಿತ 29/5/2024. ದಂಡ ಸಹಿತ (ದಿನಕ್ಕೆ ರೂ. 50) 31/5/2024. ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪನಿರ್ದೇಶಕರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ 30-05-2024. ದಂಡಸಹಿತ (ದಿನಕ್ಕೆ 50 ರೂ.) 1/6/2024.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications