
Karnataka 2nd PUC Result 2022 : ದ್ವಿತೀಯ ಪಿಯು ಫಲಿತಾಂಶ ಬೆಳಗ್ಗೆ 11.30 ಗಂಟೆಗೆ ಪ್ರಕಟ
ಬೆಂಗಳೂರು, ಜೂನ್ 18: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ಶನಿವಾರ (ಜೂನ್ 18ಕ್ಕೆ) ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಇಂದು ಬೆಳಗ್ಗೆ 11.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ http://karresult.nic.in/ ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ http://karresult.nic.in/ ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಮೊಬೈಲ್‌ನಲ್ಲೂ ಸಿಗಲಿದೆ ಫಲಿತಾಂಶ
ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭದಲ್ಲಿ ನೀಡಲಾಗಿರುವ ರಿಜಿಸ್ಟರ್ ಮಾಡಿರುವ ಮೊಬೈಲ್ ನಂಬರ್‌ಗೆ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಲಿದೆ.
ಪರೀಕ್ಷೆ ಹಾಜರಾಗಿದ್ದ ವಿದ್ಯಾರ್ಥಿಗಳು ಎಷ್ಟು?
ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ?
* ಪದವಿಪೂರ್ವ ಅಧಿಕೃತ ವೆಬ್ ಸೈಟ್ http://karresult.nic.in/ ಹೋಗಿ ಕ್ಲಿಕ್ ಮಾಡಿ.
* ಎಸ್‌ಎಸ್‌ಎಲ್‌ಸಿ ಮಾದರಿಯಲ್ಲೇ ಹೊಮ್ ಪೇಜ್ ತೆರೆದುಕೊಂಡು ಪಿಯುಸಿ ರಿಸಲ್ಟ್ ಲಿಂಕ್ ಬ್ಲಿಂಕ್ ಆಗುತ್ತಿರುತ್ತೆ ಅದನ್ನು ಕ್ಲಿಕ್ ಮಾಡಿ.
* ನೋಂದಣಿ ನಂಬರ್ ಅನ್ನು ಎಂಟ್ರಿ ಮಾಡಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿದರೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
* ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಅಥವಾ ಪ್ರಿಂಟ್ಔಟ್ ತೆಗೆದುಕೊಳ್ಳಬಹುದು.