Karnataka 2nd PUC Exam 2023 : ಪಿಯು ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ: KSRTC
ಇದೇ ಮಾರ್ಚ್ 09ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲಿದೆ. ಈ ಸಂಬಂಧ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ಒಪ್ಪಿ ಸುತ್ತೋಲೆ ಹೊರಡಿಸಿದೆ.
ಬೆಂಗಳೂರು, ಮಾರ್ಚ್ 03: ಇದೇ ಮಾರ್ಚ್ 09ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಲಿದೆ. ಈ ಸಂಬಂಧ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ಒಪ್ಪಿ ಸುತ್ತೋಲೆ ಹೊರಡಿಸಿದೆ.
ಕರ್ನಾಟಕದಲ್ಲಿ ಇದೇ ಮಾರ್ಚ್ 09 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಜರುಗಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಬೇಕಾಗುತ್ತದೆ.

ಈ ಸಂಬಂಧ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC)ಕ್ಕೆ ಮನವಿ ಮಾಡಿತ್ತು. ಮನವಿ ಒಪ್ಪಿರುವ ನಿಗಮವು ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಕೇಂದ್ರಗಳಿಗೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಮನೆಗೆ ಹಿಂತಿರುಗುವಾಗ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು ಎಂದು ತಿಳಿಸಿದೆ.
ಅಲ್ಲದೇ ವಿದ್ಯಾರ್ಥಿಗಳು ಈ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಪ್ರವೇಶ ಪತ್ರ ತೋರಿಸುವ ಮೂಲಕ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಮತ್ತು ಅಲ್ಲಿಂದ ವಾಸಸ್ಥಳಕ್ಕೆ ಬೆಂಗಳೂರು ನಗರ, ಹೊರ ವಲಯ, ಸಾಮಾನ್ಯ ಮತ್ತು ವೇಗಧೂತ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು KSRTC ಸುತ್ತೋಲೆ ಹೊರಡಿಸಿದೆ.

ಈ ಸುತ್ತೋಲೆಯಲ್ಲಿನ ಆದೇಶದಂತೆ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನದಂದು ಉಚಿತ ಬಸ್ ಸೇವೆಗಾಗಿ ನಿಗದ ಬಸ್‌ಗಳ ಎಲ್ಲ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸೂಚಿಸಿದೆ.












Click it and Unblock the Notifications