ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ, ಗಂಗಬೈರಯ್ಯಗೆ ಜಾಮೀನು
ಬೆಂಗಳೂರು, ಆಗಸ್ಟ್ 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಗಂಗಬೈರಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಸಿಐಡಿ ಬಂಧಿಸಿತ್ತು.
ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್‌ಕುಮಾರ್ ವಾರ್ಡ್‌ನ ಮಾಜಿ ಪಾಲಿಕೆ ಸದಸ್ಯ (ಬಿಜೆಪಿ) ಗಂಗಬೈರಯ್ಯ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್ ಅವರ ಜಾಮೀನು ಅರ್ಜಿ ವಜಾಗೊಳಿಸಿದ ಹಿನ್ನಲೆಯಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.[ಪತ್ರಿಕೆ ಸೋರಿಕೆ : ಬಿಬಿಎಂಪಿ ಮಾಜಿ ಸದಸ್ಯ ಬಂಧನ]

ಗಂಗಬೈರಯ್ಯ ಅವರು ದ್ವಿತೀಯ ಪಿಯುಸಿ ಓದುತ್ತಿದ್ದ ತಮ್ಮ ಮೊಮ್ಮಗನಿಗೆ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ತರಿಸಿ ಕೊಟ್ಟಿದ್ದರು ಎಂಬ ಆರೋಪವಿದೆ. ಅಕ್ರಮವಾಗಿ ಪರೀಕ್ಷೆ ಬರೆಯಲು ಮುಂದಾಗಿದ್ದ ಕೆಲ ವಿದ್ಯಾರ್ಥಿಗಳು ಗಂಗಬೈರಯ್ಯ ಅವರ ಮನೆಯಲ್ಲೇ ತಯಾರಿ ನಡೆಸಿದ್ದರೂ ಎಂಬುದು ಆರೋಪವಾಗಿದೆ.[ಪತ್ರಿಕೆ ಸೋರಿಕೆ : ರೇಣುಕಾಚಾರ್ಯ ವಿಚಾರಣೆ?]
ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ಹಗರಣದ ಪ್ರಮುಖ ಆರೋಪಿಗಳಾದ ಕಿರಣ್ ಮತ್ತು ಶಿವಕುಮಾರಸ್ವಾಮಿ ಸೇರಿದಂತೆ ಇದುವರೆಗೂ 17 ಜನರನ್ನು ಬಂಧಿಸಿದೆ.[ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ನಾಲ್ವರಿಗೆ ಜಾಮೀನು]
2016ರ ಮಾರ್ಚ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಮಾರ್ಚ್ 21 ರಂದು ನಡೆದ ರಸಾಯನಶಾಸ್ತ್ರ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ರದ್ದು ಮಾಡಲಾಗಿತ್ತು. ಮಾರ್ಚ್ 31 ರಂದು ಮರು ಪರೀಕ್ಷೆ ನಡೆಯಬೇಕಿತ್ತು. ಆದರೆ, ಅಂದು ಬೆಳಗ್ಗೆ ಪತ್ರಿಕೆ ಪುನಃ ಸೋರಿಕೆಯಾಗಿತ್ತು.












Click it and Unblock the Notifications