Breaking: ದ್ವಿತೀಯ ಪಿಯು ಫಲಿತಾಂಶ ಯಾವಾಗ? ಶಿಕ್ಷಣ ಸಚಿವರ ಹೇಳಿಕೆ
ಬೆಂಗಳೂರು, ಮೇ 19: ಎಸ್‌ಎಸ್‌ಎಲ್‌ಸಿ ಫಲಿತಾಂಶ ಬೆನ್ನಲ್ಲಿಯೇ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಬಗ್ಗೆಯೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ದ್ವಿತೀಯ ಪಿಯು ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ. ಮುಂದಿನ ತಿಂಗಳು ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುವ ನಿರೀಕ್ಷೆ ಇದೆ ಎಂದು ಅವರು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ರಾಜ್ಯದ 1 ಸಾವಿರಕ್ಕೂ ಹೆಚ್ಚು ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 6,84,255 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಅದರಲ್ಲಿ 600519 ವಿದ್ಯಾರ್ಥಿಗಳು ರೆಗ್ಯುಲರ್ ವಿದ್ಯಾರ್ಥಿಗಳು, 61808 ಪುನರಾವರ್ತಿತ, ಖಾಸಗಿಯಾಗಿ ನೋಂದಣಿ ಮಾಡಿರುವ 21928 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.













Click it and Unblock the Notifications