2nd PUC Result 2024: 600ಕ್ಕೆ 588 ಅಂಕ ಪಡೆದು ಕರ್ನಾಟಕದಲ್ಲಿ ಮೋಡಿ ಮಾಡಿದ ಆಂಧ್ರ ಹುಡುಗ.! ಯಾರಿದು?-ಇಲ್ಲಿದೆ ಮಾಹಿತಿ

2nd PUC Result 2024: ಮಾರ್ಚ್‌ 1ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಯ ಫಲಿತಾಂಶವನ್ನು ಬುಧವಾರ (ಏಪ್ರಿಲ್‌ 11) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಣೆ ಮಾಡಿದ್ದು, ಎಲ್ಲಾ ಜಿಲ್ಲೆಗಳ ಪೈಕಿ ದಕ್ಷಿಣ ಜಿಲ್ಲೆ ಪ್ರಥಮ ಸ್ಥಾನ ಪಡೆದಿತ್ತು. ಮತ್ತೊಂದೆಡೆ ವಿಶೇಷ ಏನಂದ್ರೆ ಆಂಧ್ರ ಹುಡುಗ ಕರ್ನಾಟಕದಲ್ಲಿ ಮೋಡಿ ಮಾಡಿರುವುದು.

ಬುಧವಾರ ಘೋಷಣೆ ಮಾಡಲಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಬೆಂಗಳೂರು ನಗರದ ಕೆಂಗೇರಿಯ ರಾಮೋಹಳ್ಳಿಯಲ್ಲಿರುವ ಯೂನಿವರ್ಸಲ್ ಪಿಯು ಕಾಲೇಜಿನ ವಿದ್ಯಾರ್ಥಿ ಗಂಧಂ ಗಿರಿ ವರುಣ್ ಸಂದೇಶ್ 9ನೇ ರ‍್ಯಾಂಕ್‌ ಪಡೆದಿದ್ದಾರೆ. 600 ಅಂಕಗಳಿಗೆ 588 ಅಂಕಗಳಿಸುವ ಮೂಲಕ ಅವರು ಈ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.

2nd PUC Result 2024 Andhra Pradesh s boy well achievement in Karnataka

ವಿಶೇಷ ಎಂದರೆ, ಗಂಧಂ ಗಿರಿ ವರುಣ್ ಸಂದೇಶ್‌, ಮೂಲತಃ ಆಂಧ್ರದ ನೆಲ್ಲೂರಿನ ಹುಡುಗ. ಐಎಎಸ್ ಮಾಡುವ ಕನಸಿನೊಂದಿಗೆ ಅವರು ಯೂನಿವರ್ಸಲ್ ಪಿಯು ಕಾಲೇಜಿಗೆ ಸೇರ್ಪಡೆಯಾಗಿದ್ದು, ಅವರ ತಂದೆ ಹಾಗೂ ತಾಯಿ ಇಬ್ಬರೂ ಶಿಕ್ಷಕರಾಗಿದ್ದಾರೆ.

ಇನ್ನು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಗಂಧಂ ಗಿರಿ ವರುಣ್ ಸಂದೇಶ್ ಅವರನ್ನು ಯೂನಿವರ್ಸಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅಧ್ಯಕ್ಷ ಶ್ರೀ ಆರ್ ಉಪೇಂದ್ರ ಶೆಟ್ಟಿ ಅಭಿನಂದಿಸಿದ್ದಾರೆ. ಯೂನಿವರ್ಸಲ್ ಸಂಸ್ಥೆಯ 25 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದು, 12 ವಿದ್ಯಾರ್ಥಿಗಳು ಫಸ್ಟ್‌‌ ಕ್ಲಾಸ್‌ನಲ್ಲಿ ಪಾಸಾಗಿದ್ದು, ಉಳಿದಂತೆ ಎಲ್ಲಾ ವಿದ್ಯಾರ್ಥಿಗಳು ಉತ್ತಿರ್ಣಾಗುವುದರ ಮೂಲಕ ಯೂನಿವರ್ಸಲ್ ಸಂಸ್ಥೆಯು 100% ರಿಸಲ್ಟ್ ಪಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೀಗೆ ಆಂಧ್ರದ ಹುಡುಗ ಕರ್ನಾಟಕದಲ್ಲಿ ವ್ಯಾಸಂಗ ಮಾಡುತ್ತಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆಯುವ ಮೂಲಕ ಎಲ್ಲಾರನ್ನು ನಿಬ್ಬೆರಗಾಗುವಂತೆ ಮಾಡಿದ್ದಾನೆ.

ಯಾವ್ಯಾವ ಜಿಲ್ಲೆಗೆ ಯಾವ ಸ್ಥಾನ?: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37%ನೊಂದಿಗೆ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ 96.80%ನೊಂದಿಗೆ ದ್ವಿತೀಯ, ವಿಜಯಪುರ 94.89%ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಇನ್ನು ಗದಗ ಜಿಲ್ಲೆ 72.86%ನೊಂದಿಗೆ ಕೊನೆ ಸ್ಥಾನದಲ್ಲಿದೆ.

ಯಾರು ಮೇಲುಗೈ?: ಇನ್ನು ಈ ಬಾರಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಜನ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ. ಅಲ್ಲದೆ ಈ ಬಾರಿ ಬಾಲಕಿಯರೇ ಮೇಲಯಗೈ ಸಾಧಿಸಿದ್ದಾರೆ.

ಫಲಿತಾಂಶ ಪರಿಶೀಲಿಸುವ ವಿಧಾನ?

  • ಶಿಕ್ಷಣ ಇಲಾಖೆಯ karresults.nic.in ಅಥವಾ pue.kar.nic ಅಧಿಕೃತ ವೆಬ್‌​ಸೈಟ್‌​ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ನಮೂದಿಸಿ. ವಿಜ್ಞಾನ, ವಾಣಿಜ್ಯ ಮತ್ತು ಕಲೆ ಎಂಬ ಆಯ್ಕೆಗಳಿರಲಿದ್ದು, ನಿಮ್ಮ ಕೋರ್ಸ್‌ ಯಾವುದೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
  • ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸಲಿದ್ದು, ಬಳಿಕ ಈ ಫಲಿತಾಂಶದ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ಬಾರಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರು ಭಾಗಗಳಲ್ಲಿ ನಡೆಸಲಾಗಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+