2nd PUC Result 2024: ಏಪ್ರಿಲ್‌ 10ರಂದು ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಿಸುವುದೇಗೆ?-ಇಲ್ಲಿದೆ ಮಾಹಿತಿ

2nd PUC Result 2024: ಮಾರ್ಚ್‌ 1 ರಿಂದ ಮಾರ್ಚ್‌ 22 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಈ ಪರೀಕ್ಷೆಯ ಫಲಿತಾಂಶವನ್ನು ಬುಧವಾರ (ಏಪ್ರಿಲ್‌ 10) 10 ಗಂಟೆಯ ನಂತರ ಘೋಷಣೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದೆ. ಹಾಗಾದರೆ ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಣೆ ಮಾಡುವುದು ಹೇಗೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದಾಗಿದೆ.

2nd PUC Result 2024 How to watch Result on April 10 know details

ಫಲಿತಾಂಶ ಪರಿಶೀಲಿಸುವ ವಿಧಾನ?

* ಶಿಕ್ಷಣ ಇಲಾಖೆಯ karresults.nic.in ಅಥವಾ pue.kar.nic ಅಧಿಕೃತ ವೆಬ್‌​ಸೈಟ್‌​ಗೆ ಭೇಟಿ ನೀಡಿ.
* ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ನಮೂದಿಸಿ. ವಿಜ್ಞಾನ, ವಾಣಿಜ್ಯ ಮತ್ತು ಕಲೆ ಎಂಬ ಆಯ್ಕೆಗಳಿರಲಿದ್ದು, ನಿಮ್ಮ ಕೋರ್ಸ್‌ ಯಾವುದೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸಲಿದ್ದು, ಬಳಿಕ ಈ ಫಲಿತಾಂಶದ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಇನ್ನು ಈ ಬಾರಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರು. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮೂರು ಭಾಗಗಳಲ್ಲಿ ನಡೆಸಲಾಗಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+